ಹಾಸನ: ತಾಲ್ಲೂಕು ಕಛೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಮಾಡುವುದರ ಮೂಲಕ ಹಳೆಯ ದಾಖಲೆಗಳ ಸಂರಕ್ಷಣೆ ಮಾಡುವುದು ಹಾಗೂ ಕಳುವಾಗಲು, ತಿದ್ದಲು ಸಾಧ್ಯವಾಗುವುದಿಲ್ಲ ಎಂದು ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ತಿಳಿಸಿದರು.
ನಗರದ ಎಂ.ಜಿ. ರಸ್ತೆ ಬಳಿ ಇರುವ ತಹಸೀಲ್ದಾರ್ ಕಛೇರಿಯಲ್ಲಿ ಬುಧವಾರದಂದು ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಕಛೇರಿ, ಸರ್ವೇ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣವನ್ನು ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯಿಂದ ಹಾಸನ ತಾಲೂಕು ಕಛೇರಿಯಲ್ಲಿ ಹಿಂದಿನಿಂದ ಬಂದಿರುವ ಭೂ ದಾಖಲೆ ಏನಿದೆ ಎಲ್ಲಾವನ್ನು ಡಿಜಿಟಲಿಕರಣ ಮಾಡುವುದಕ್ಕೆ ಸರಕಾರದವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನೆ ಮಾಡುವುದರ ಮೂಲಕ ಚಾಲನೆ ಕೊಡಲಾಗಿದೆ. ಹಿಂದಿನ ಎಲ್ಲಾ ಭೂ ದಾಖಲೆಗಳನ್ನು ಸುಭ್ರದ್ರವಾಗಿಡಲು ಮತ್ತು ಶಾಶ್ವತವಾಗಿ ರಕ್ಷಣೆ ಮಾಡಲು ಹಾಗೂ ತಿದ್ದುಪಡಿ ಸೇರಿದಂತೆ ಯಾವ ದುರುಪಯೋಗವಾಗದಂತೆ ನೋಡಿಕೊಳ್ಳುವುದಾಗಿದೆ ಎಂದರು. ಡಿಜಿಟಲಿಕರಣ ಮಾಡಿದರೇ ಯಾವ ಸಮಸ್ಯೆ ಬರುವುದಿಲ್ಲ. ಎಲ್ಲಾರಿಗೂ ಅನುಕೂಲವಾಗಲಿ ಎಂದು ಸರಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಹಳೆಯ ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತ ಡಿಜಿ ದಾಖಲೆಗಳಾಗಿ ಪರಿವರ್ತನೆ. ರೆಕಾರ್ಡ್ ರೂಂ ಗಳಿಂದ ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆ. ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳುವಾಗಲು, ತಿದ್ದಲು ಅಸಾಧ್ಯ. ನೇರವಾಗಿ ನೀವೇ ಡಿಜಿಟಲ್ ಮಾಧ್ಯಮದಿಂದ ಭೂ ದಾಖಲೆಗಳನ್ನು ಪಡೆದುಕೊಳ್ಳುವ ಸೌಲಭ್ಯ ಸಿಗಲಿದೆ ಎಂದು ಹೇಳಿದರು. ನಿಮ್ಮ ದಾಖಲೆಗಳನ್ನು ನಿಮ್ಮ ಕೈಗೆ ತಲುಪಿಸುವ ಯೋಜನೆಯಾಗಿದೆ. ವಿಳಂಬ, ಅಡೆ ತಡೆಗಳನ್ನು ಆಲಿಸಿ, ತ್ವರಿತ ಆಡಳಿತ ಸೇವೆಯನ್ನು ಒದಗಿಸುವ ಪ್ರಯತ್ನ.ಡಿಜಿ ಸ್ಪರ್ಶದಿಂದ ಸಿಗಲಿದೆ ಎಂದರು.
ಇದೆ ವೇಳೆ ತಹಸೀಲ್ದಾರ್ ಶ್ವೇತಾ ರವೀಂದ್ರ, ಉಪ ತಹಸೀಲ್ದಾರ್ ಮೋಹನ್ ಕುಮಾರ್ ಇತರರು ಉಪಸ್ಥಿತರಿದ್ದರು.