Wednesday, September 17, 2025

ಸತ್ಯ | ನ್ಯಾಯ |ಧರ್ಮ

ಧರ್ಮಸ್ಥಳ ಪ್ರಕರಣ: ಬಂಗ್ಲೆ ಗುಡ್ಡೆಯಲ್ಲಿ ಮಹಜರು ನಡೆಸಲು ಎಸ್‌ಐಟಿಗೆ ಅರಣ್ಯ ಇಲಾಖೆ ಅನುಮತಿ

ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ಬಂಗ್ಲಗುಡ್ಡ ಪ್ರದೇಶದಲ್ಲಿ ಸ್ಥಳ ಮಹಜರು ನಡೆಸಲು ಅರಣ್ಯ ಇಲಾಖೆಯು ವಿಶೇಷ ತನಿಖಾ ತಂಡಕ್ಕೆ (SIT) ಹಸಿರು ನಿಶಾನೆ ನೀಡಿದೆ.

ಈ ಹಿನ್ನೆಲೆಯಲ್ಲಿ, ಇಂದು (ಬುಧವಾರ) ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ಡದಲ್ಲಿ, ಪ್ರಮುಖ ಸಾಕ್ಷಿ ವಿಠಲಗೌಡ ಬುರುಡೆ ಸೂಚಿಸಿರುವ ಜಾಗದಲ್ಲಿ ಮಹಜರು ನಡೆಸಲಿದ್ದಾರೆ.

ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಲಿದ್ದು, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ತಂಡ ಮತ್ತು ಕಂದಾಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಜರಿರಲು ಸೂಚಿಸಲಾಗಿದೆ. ಬಂಗ್ಲಗುಡ್ಡದಲ್ಲಿ ಭೂಮಿ ಅಗೆಯುವ ಬದಲು, ಕೇವಲ ಸ್ಥಳ ಮಹಜರು ನಡೆಸಲಾಗುವುದು ಎಂದು ತಿಳಿದುಬಂದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page