ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ, ಬಂಗ್ಲಗುಡ್ಡ ಪ್ರದೇಶದಲ್ಲಿ ಸ್ಥಳ ಮಹಜರು ನಡೆಸಲು ಅರಣ್ಯ ಇಲಾಖೆಯು ವಿಶೇಷ ತನಿಖಾ ತಂಡಕ್ಕೆ (SIT) ಹಸಿರು ನಿಶಾನೆ ನೀಡಿದೆ.
ಈ ಹಿನ್ನೆಲೆಯಲ್ಲಿ, ಇಂದು (ಬುಧವಾರ) ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ಡದಲ್ಲಿ, ಪ್ರಮುಖ ಸಾಕ್ಷಿ ವಿಠಲಗೌಡ ಬುರುಡೆ ಸೂಚಿಸಿರುವ ಜಾಗದಲ್ಲಿ ಮಹಜರು ನಡೆಸಲಿದ್ದಾರೆ.
ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಲಿದ್ದು, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ತಂಡ ಮತ್ತು ಕಂದಾಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಜರಿರಲು ಸೂಚಿಸಲಾಗಿದೆ. ಬಂಗ್ಲಗುಡ್ಡದಲ್ಲಿ ಭೂಮಿ ಅಗೆಯುವ ಬದಲು, ಕೇವಲ ಸ್ಥಳ ಮಹಜರು ನಡೆಸಲಾಗುವುದು ಎಂದು ತಿಳಿದುಬಂದಿದೆ.