ಹಾಸನ : ಸರ್ಕಾರಿ, ಅರೆ ಸರ್ಕಾರಿ, ಖಾಸಗಿ ವಲಯ, ಸಂಘಟಿತ ಅಸಂಘಟಿತ ವಲಯದಲ್ಲಿ ಹತ್ತಕ್ಕಿಂತ ಹೆಚ್ಚು ಮಹಿಳೆಯರು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಕಡ್ಡಾಯವಾಗಿ ಆಂತರಿಕಾ ದೂರು ನಿವಾರಣ ಸಮಿತಿ ರಚಿಸಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೆನ್ನೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಮಹಿಳೆಯರು ಕೆಲಸ ಮಾಡುವ ಸ್ಥಳದಲ್ಲಿ ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರು ದೂರು ನೀಡಲು ಈ ಸಮಿತಿ ನೆರವಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಮಟ್ಟದ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾದ ರೂಪ ಹಾಸನ್ ಅವರು ಮಾತನಾಡಿ ಮಹಿಳೆಯರು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ನೆಮ್ಮದಿಯಾಗಿ ಯಾವುದೇ ಮುಜುಗರವಿಲ್ಲದೆ ಕೆಲಸ ನಿರ್ವಹಿಸಲು ಹಾಗೂ ಮಹಿಳೆಯರ ಸುರಕ್ಷತೆಗಾಗಿ 2013 ರಲ್ಲಿ ಲೈಂಗಿಕ ದೌರ್ಜನ್ಯ ತಡೆ, ನಿರ್ಬಂಧ ಮತ್ತು ಪರಿಹಾರ ಕಾಯ್ದೆ ಜಾರಿಗೆ ಬಂದಿದೆ ಎಂದರಲ್ಲದೆ ಆಂತರಿಕ ದೂರು ನಿವಾರಣ ಸಮಿತಿ ಕರ್ತವ್ಯ ನಿರ್ವಹಿಸುವ ಬಗ್ಗೆ ಹಾಗೂ ಕಾಯ್ದೆಯ ಬಗ್ಗೆ ಸವಿವರವಾಗಿ ವಿವರಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲ, ಜಿಲ್ಲಾಧಿಕಾರಿಯವರ ಕಚೇರಿಯ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.