Saturday, October 19, 2024

ಸತ್ಯ | ನ್ಯಾಯ |ಧರ್ಮ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು ನಗರದ ಮಣಿಪಾಲ್ ಆಸ್ಪತ್ರೆಗೆ ಎಸ್ ಎಂ ಕೃಷ್ಣ ಅವರನ್ನು ದಾಖಲು ಮಾಡಿದ ಬಗ್ಗೆ ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ ಹಾಗೂ ಡಾ. ಸುನಿಲ್ ಕಾರಂತ್ ನೇತೃತ್ವದಲ್ಲಿ ಮಾಜಿ ಸಿಎಂ ಎಸ್‌ಎಂ ಕೃಷ್ಣ ಗೆ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಲಾಗುತ್ತಿದೆ.

ಕೆಲ ದಿನಗಳ ಹಿಂದೆ ಎಸ್​ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page