ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಅವರನ್ನು ಮಹಾರಾಷ್ಟ್ರದ ಥಾಣೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಲವು ದಿನಗಳಿಂದ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ. ಕಳೆದ ಶನಿವಾರವೇ ವಿನೋದ್ ಕಾಂಬ್ಳಿ ಅವರ ಆರೋಗ್ಯ ಹದಗೆಟ್ಟಿದ್ದು, ಅಂದೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಸ್ಥಿತಿ ಇನ್ನೂ ಸುಧಾರಿಸಿಲ್ಲ ಎಂದು ತಿಳಿದುಬಂದಿದೆ.
ಇತ್ತೀಚೆಗೆ ತಮ್ಮ ಆತ್ಮೀಯ ಸ್ನೇಹಿತ ಸಚಿನ್ ತೆಂಡೂಲ್ಕರ್ ಅವರನ್ನ ಭೇಟಿಯಾಗಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ಸಮಯದಲ್ಲೂ ಕಾಂಬ್ಳಿ ಆರೋಗ್ಯ ಚೆನ್ನಾಗಿರಲಿಲ್ಲ. 52 ನೇ ವಯಸ್ಸಿನಲ್ಲೇ, ಅವರು 75 ವರ್ಷ ವಯಸ್ಸಿನವರಂತೆ ಕಾಣುತ್ತಿದ್ದರು. ಮಾತನಾಡಲು ಸಹ ಕಷ್ಟಪಡುತ್ತಿದ್ದರು.
ಥಾಣೆಯ ಆಕೃತಿ ಆಸ್ಪತ್ರೆ ವರದಿಗಳ ಪ್ರಕಾರ ಸಧ್ಯ ಅವರ ಆರೋಗ್ಯ ಸ್ಥಿರವಾಗಿದೆ. ಚೇತರಿಸಿಕೊಳ್ಳಲು ಹಲವು ದಿನಗಳು ಬೇಕಾಗಬಹುದು. ಈಗ ಸಂಪೂರ್ಣ ಗುಣಮುಖರಾಗಿಲ್ಲ.. ಎಂದು ತಿಳಿದು ಬಂದಿದೆ.