ಹರಿಯಾಣದ ಮಾಜಿ ಮುಖ್ಯಮಂತ್ರಿ, ಭಾರತೀಯ ರಾಷ್ಟ್ರೀಯ ಲೋಕದಳದ ಪ್ರಮುಖ ನಾಯಕ ಓಂ ಪ್ರಕಾಶ್ ಚೌಟಾಲಾ ಅವರು ಶುಕ್ರವಾರ ಹರಿಯಾಣದ ರಾಜಧಾನಿ ಗುರುಗ್ರಾಮದಲ್ಲಿ ನಿಧನರಾಗಿದ್ದಾರೆ.
ಓಂ ಪ್ರಕಾಶ್ ಚೌಟಾಲಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಪಕ್ಷದ ವಕ್ತಾರರು ಮಾಹಿತಿ ನೀಡಿದ್ದಾರೆ.
ಚೌಟಾಲಾ ಅವರು ಡಿಸೆಂಬರ್ 1989 ರಿಂದ ಪ್ರಾರಂಭವಾಗಿ ದಾಖಲೆಯ ನಾಲ್ಕು ಅವಧಿಗೆ ಹರಿಯಾಣದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಭಾರತೀಯ ರಾಷ್ಟ್ರೀಯ ಲೋಕ ದಳ (ಐಎನ್‌ಎಲ್ಡಿ) ನಾಯಕ ಓಂ ಪ್ರಕಾಶ್ ಚೌಟಾಲಾ ಗುರುಗ್ರಾಮದ ತಮ್ಮ ನಿವಾಸದಲ್ಲಿ ನಿಧನರಾದರು.