ಇಸ್ರೋ ಸಂಸ್ಥೆಯನ್ನು 9 ವರ್ಷ ಮುನ್ನಡೆಸಿದ್ದ ವಿಜ್ಞಾನಿ ಕೆ.ಕಸ್ತೂರಿ ರಂಗನ್ ಇಂದು ಶುಕ್ರವಾರ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಅನೇಕ ರಾಕೆಟ್‌ಗಳ ಉಡಾವಣೆ, ಭಾರತದಲ್ಲಿ ವಿಜ್ಞಾನ, ತಂತ್ರಜ್ಞಾನ ಹಾಗೂ ಇಸ್ರೋ ಬೆಳವಣಿಗೆಯಲ್ಲಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಪಶ್ಚಿಮ ಘಟ್ಟ ಸಂರಕ್ಷಣೆಗೆ ಕಸ್ತೂರಿ ರಂಗನ್ ಅವರು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದರು. ಮಲೆನಾಡು ಭಾಗಕ್ಕೆ ಈ ವರದಿ ಮಾರಕ ಎಂಬ ಮಾತು ಬಂದರೂ ಪರಿಸರ ಸಂರಕ್ಷಣೆಗೆ ಪೂರಕವಾದ ಅಂಶಗಳು ಈ ವರದಿಯಲ್ಲಿ ಇದ್ದ ಹಿನ್ನೆಲೆಯಲ್ಲಿ ಇದನ್ನು ಜಾರಿ ಮಾಡುವ ಬಗ್ಗೆಯೂ ಸರ್ಕಾರಗಳಲ್ಲಿ ಗೊಂದಲಗಳಿವೆ.
ಹಾಗೆಯೇ ಪರಿಸರ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ರಾಜ್ಯಕ್ಕೆ ಅಪರಿಮಿತ ಕೊಡುಗೆ ನೀಡಿದ್ದರು. ರಾಜ್ಯಸಭೆ ಸದಸ್ಯರಾಗಿ ದೇಶದ ಮಹತ್ವಪೂರ್ಣ ನೀತಿಗಳನ್ನು ರೂಪಿಸುವಲ್ಲಿಯೂ ನಿರ್ಣಾಯಕ ಪಾತ್ರ ವಹಿಸಿದ್ದರು. ಕಸ್ತೂರಿ ರಂಗನ್ ಅವರ ಸಾಧನೆಯನ್ನು ಗುರುತಿಸಿದ್ದ ಭಾರತ ಸರ್ಕಾರ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ನೀಡಿ ಗೌರವಿಸಿದೆ.
