ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ

ಜಾರ್ಖಂಡ್ ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಜಾರ್ಖಂಡ್ ಮುಕ್ತಿ ಮೋರ್ಚಾ ಮಾಜಿ ನಾಯಕ ಚಂಪೈ ಸೊರೆನ್ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜಾರ್ಖಂಡ್ ರಾಜ್ಯದ ರಾಜಧಾನಿ ರಾಂಚಿಯಲ್ಲಿ ಬಿಜೆಪಿ ಪಕ್ಷದ ಹಲವು ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಆಗಿದೆ.

ಜಾರ್ಖಂಡ್ ನ ಹಾಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಅಧಿಕಾರ ಸ್ವೀಕಾರದ ನಂತರ ಪಕ್ಷದ ನಾಯಕರ ಬಗ್ಗೆ ಅಸಮಾಧಾನ ಹೊಂದಿದ್ದ ಚಂಪೈ ಸೊರೆನ್ ಅವರನ್ನು ಬಿಜೆಪಿ ತನ್ನತ್ತ ಸೆಳೆಯಲು ಯಶಸ್ವಿಯಾಗಿದೆ. ಹೀಗಾಗಿ ಇಂದು ಅಧಿಕೃತವಾಗಿ ರಾಂಚಿಯಲ್ಲಿ ಚಂಪೈ ಸೊರೆನ್ ಬಿಜೆಪಿ ಸೇರಿದ್ದಾರೆ.

ಇಂದು ಶುಕ್ರವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು.

Related Articles

ಇತ್ತೀಚಿನ ಸುದ್ದಿಗಳು