Friday, June 14, 2024

ಸತ್ಯ | ನ್ಯಾಯ |ಧರ್ಮ

ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ (ಎಸ್‌ಎಂ) ಕೃಷ್ಣ ಅವರನ್ನು ಸೋಮವಾರ ಇಲ್ಲಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿರುವ 91 ವರ್ಷದ ಕೃಷ್ಣ ಅವರಿಗೆ ಡಾ ಸತ್ಯನಾರಾಯಣ ಮೈಸೂರು ಮತ್ತು ವೈದ್ಯಕೀಯ ತಜ್ಞರ ತಂಡ ಚಿಕಿತ್ಸೆ ನೀಡುತ್ತಿದೆ.

“ಅವರ ಆರೋಗ್ಯ ಸ್ಥಿರವಾಗಿದೆ. ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಆತಂಕ ಪಡುವ ಅಗತ್ಯವಿಲ್ಲ” ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಏಪ್ರಿಲ್ 21ರಂದು ತೀವ್ರ ಉಸಿರಾಟದ ಸೋಂಕಿನಿಂದಾಗಿ ಕೃಷ್ಣ ಅವರನ್ನು ವಿಟ್ಟಲ್ ಮಲ್ಯ ರಸ್ತೆಯಲ್ಲಿರುವ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿತ್ತು.

ಅಲ್ಲಿ ಹೃದ್ರೋಗ ತಜ್ಞರು, ಶ್ವಾಸಕೋಶಶಾಸ್ತ್ರಜ್ಞರು ಮತ್ತು ತೀವ್ರತಜ್ಞರು ಅವರಿಗೆ ಚಿಕಿತ್ಸೆ ನೀಡಿದ್ದರು.

Related Articles

ಇತ್ತೀಚಿನ ಸುದ್ದಿಗಳು