ಬೆಂಗಳೂರು : ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ (HD Devegowda) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಬೆಂಗಳೂರಿನ (Bengaluru) ಮಣಿಪಾಲ್ ಆಸ್ಪತ್ರೆಗೆ (Manipal hospital) ದಾಖಲಿಸಲಾಗಿದೆ. ಸದ್ಯ ದೇವೇಗೌಡರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದೇವೇಗೌಡರಿಗೆ 92 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಅನಾರೋಗ್ಯ ಕಾಡಿದೆ ಎನ್ನಲಾಗಿದ್ದು, ಕುಟುಂಬಸ್ಥರಿಂದ ಇನ್ನಷ್ಟೇ ಮಾಹಿತಿ ತಿಳಿಯಬೇಕಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ದೇವೇಗೌಡರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಇಳಿ ವಯಸ್ಸಿನಲ್ಲಿಯೂ ರಾಜಕಾರಣದಲ್ಲಿ ಸಕ್ರಿಯವಾಗಿದ್ದಾರೆ. ಸದ್ಯ ರಾಜ್ಯಸಭಾ ಸದಸ್ಯರಾಗಿರುವ ಅವರು,ಮೊನ್ನೆ ಮೊನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ದೇವೇಗೌಡರು, ಮುಂಬರುವ ಸ್ಥಳೀಯ ಚುನಾವಣೆಯಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಘೋಷಣೆ ಮಾಡಿದ್ದರು.