Sunday, June 8, 2025

ಸತ್ಯ | ನ್ಯಾಯ |ಧರ್ಮ

ಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್‌ಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. 92 ವರ್ಷ ಪ್ರಾಯದ ಮನಮೋಹನ್ ಸಿಂಗ್ ಅವರು ಹಲವು ದಿನಗಳಿಂದ ವಯೋಸಹಜ ಖಾಯಿಲೆಗಳಿಗೆ ತುತ್ತಾಗಿ ಬಳಲುತ್ತಿದ್ದರು.

ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ದೇಶದಲ್ಲಿ ಎರಡು ಅವಧಿಗೆ ಪ್ರಧಾನಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. ಅರ್ಥಶಾಸ್ತ್ರಜ್ಞರಾಗಿ, ಶಿಕ್ಷಣ ತಜ್ಞರಾಗಿ, ಅಧಿಕಾರಿಯಾಗಿ, ಹಣಕಾಸು ಮಂತ್ರಿಯಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

ನೆಹರು, ಇಂದಿರಾಗಾಂಧಿ, ಮೋದಿ ಬಳಿಕ ಅತಿ ಹೆಚ್ಚು ಕಾಲ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದವರಲ್ಲಿ ಅವರು ನಾಲ್ಕನೇಯವರಾಗಿದ್ದಾರೆ. 2004ರಿಂದ 2014ರವರೆಗೆ ಪ್ರಧಾನಿಯಾಗಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page