ಹಾಸನ : ಜಿಲ್ಲೆಯಲ್ಲಿ ಹೃದಯಾಘಾತದ ಸಾವುಗಳು ಮುಂದುವರಿದಿದ್ದು, ಇಂದು ಒಂದೇ ದಿನ ನಾಲ್ಕು ಜನರು ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾರೆ. ಇದರಲ್ಲಿ ರಂಗೋಲಿಹಳ್ಳ ಬಡಾವಣೆಯ ನಿವಾಸಿ ಸತ್ಯನಾರಾಯಣರಾವ್ (63) ಕೂಡ ಒಬ್ಬರು.
ಹಾಸಬಾಂಬ ದೇಗುಲದ ಹಿಂಭಾಗದ ಹೊಸಲೈನ್ ರಸ್ತೆಯಲ್ಲಿ ಆಟೋ ಚಾಲನೆ ಮಾಡುತ್ತಿದ್ದ ವೇಳೆ ಸತ್ಯನಾರಾಯಣರಾವ್‌ಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಆಟೋದಲ್ಲಿರುವಾಗಲೇ ಕುಸಿದು ಬಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯನ್ನು ಗಮನಿಸಿದ ಸ್ಥಳೀಯ ನರ್ಸಿಂಗ್ ವಿದ್ಯಾರ್ಥಿಗಳು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ, ಆಸ್ಪತ್ರೆಗೆ ತಲುಪುವ ಮೊದಲೇ ಅವರು ಕೊನೆಯುಸಿರೆಳೆದಿದ್ದರು.
ಸತ್ಯನಾರಾಯಣರಾವ್ ಈ ಹಿಂದೆಯೂ ಹೃದಯ ಸಂಬಂಧಿ ಖಾಯಿಲೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮನೆಯಿಂದ ಆಟೋ ಚಾಲನೆಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.