ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರ ದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಹೊರವಲಯದ ಮಾಕಳಿಯಲ್ಲಿ ಈ ಅಪಘಾತ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮಾಕಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
ಬೆಳಗ್ಗೆ ದೇವಸ್ಥಾನಕ್ಕೆಂದು ಇನ್ನೋವಾ ಕಾರಿನಲ್ಲಿ 8 ಮಂದಿ ಬಂದಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.