ಸಿನಿಮಾ, ಡಾಕ್ಯುಮೆಂಟರಿ, ವೆಬ್ ಸೀರೀಸ್, ಯೂಟ್ಯೂಬ್ ಕಂಟೆಂಟ್ ನಿರ್ಮಾಣ ಸೇರಿದಂತೆ ದೃಶ್ಯ ಮಾಧ್ಯಮ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಯುವಜನರಿಗೆ ಉಚಿತವಾಗಿ ತರಬೇತಿ ನೀಡುವ ಉದ್ದೇಶದಿಂದ ಸಂವಾದ ಬದುಕು – ಸೆಂಟರ್ ಫಾರ್ ಲೈವ್ಲಿಹುಡ್ಸ್ ಲರ್ನಿಂಗ್ ಸಂಸ್ಥೆ ಆರು ತಿಂಗಳ ಫಿಲ್ಮ್ ಮೇಕಿಂಗ್ ಕೋರ್ಸ್ ಆಯೋಜಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಕೋರ್ಸ್ನಲ್ಲಿ ಸಿನಿಮಾ ನಿರ್ಮಾಣದ ವಿವಿಧ ಹಂತಗಳ ಕುರಿತು ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಸ್ಕ್ರೀನ್ ರೈಟಿಂಗ್, ನಿರ್ದೇಶನ, ಕ್ಯಾಮೆರಾ ನಿರ್ವಹಣೆ, ಲೈಟಿಂಗ್, ಸೌಂಡ್ ಡಿಸೈನ್, ವಿಡಿಯೋ ಎಡಿಟಿಂಗ್, ಗ್ರಾಫಿಕ್ ಡಿಸೈನ್, ಪೋಸ್ಟ್ ಪ್ರೊಡಕ್ಷನ್ ಹಾಗೂ ಫಿಲ್ಮ್ ಮಾರ್ಕೆಟಿಂಗ್ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಒಳಗೊಂಡಿರಲಿದೆ ಎಂದು ಸಂಸ್ಥೆ ತಿಳಿಸಿದೆ.
ಸಿನಿಮಾ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಪದವೀಧರರು, ಸ್ನಾತಕೋತ್ತರ ಪದವೀಧರರು ಮತ್ತು ವೃತ್ತಿಪರ ಶಿಕ್ಷಣ ಪಡೆದವರು ಕೋರ್ಸ್ಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಉದ್ಯಮದ ಅನುಭವಿ ನಿರ್ದೇಶಕರು, ಬರಹಗಾರರು ಹಾಗೂ ತಾಂತ್ರಿಕ ತಜ್ಞರೊಂದಿಗೆ ನೇರ ಸಂವಾದ ಮತ್ತು ಮಾರ್ಗದರ್ಶನ ಪಡೆಯುವ ಅವಕಾಶವೂ ಕಲ್ಪಿಸಲಾಗಿದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಚಿತ ಆಹಾರ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಜೊತೆಗೆ ಮಾಧ್ಯಮ ಹಾಗೂ ಸಿನಿಮಾ ಸಂಬಂಧಿತ ಕ್ಷೇತ್ರಗಳಲ್ಲಿ ಇಂಟರ್ನ್ಶಿಪ್ ಅವಕಾಶಗಳನ್ನು ಒದಗಿಸಲಾಗುತ್ತದೆ. ಗ್ರಾಮೀಣ ಹಾಗೂ ಹಿಂದುಳಿದ ಹಿನ್ನೆಲೆಯ ಯುವಜನರಿಗೆ ಆದ್ಯತೆ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ಜೂನ್ 25ರಿಂದ ಕೋರ್ಸ್ ಆರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಸಿನಿಮಾ ಅಥವಾ ಕಥೆಯ ಕುರಿತ ಗುರಿ, ಕನಸು ಅಥವಾ ಅನುಭವವನ್ನು 300ರಿಂದ 500 ಪದಗಳಲ್ಲಿ ಬರೆದು ಗೂಗಲ್ ಫಾರ್ಮ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇವಲ 25 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಶೀಘ್ರ ಅರ್ಜಿ ಸಲ್ಲಿಸುವಂತೆ ಸಂಸ್ಥೆ ಮನವಿ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ 99720 89471 ಅಥವಾ 99450 65060 ಸಂಖ್ಯೆಗೆ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸಲು ಲಿಂಕ್: https://forms.gle/jaBSGKZrrP4X66uF6
massmedia@samvadabaduku.org ಇ-ಮೇಲ್ ಮೂಲಕವೂ ಮಾಹಿತಿ ಪಡೆಯಬಹುದಾಗಿದೆ.
