Thursday, June 13, 2024

ಸತ್ಯ | ನ್ಯಾಯ |ಧರ್ಮ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2 : ವಿಧ್ಯಾರ್ಥಿಗಳಿಗೆ KSRTC ಮತ್ತು BMTC ಯಲ್ಲಿ ಉಚಿತ ಪ್ರಯಾಣ

ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ದ್ವಿತೀಯ PUC ಪೂರಕ ಪರೀಕ್ಷೆ ಜರುಗಲಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಪರೀಕ್ಷೆಗೆ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಸಿದ್ದತಾ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕೆಲವು ಕಡ್ಡಾಯ ನಿಯಮ ಪಾಲನೆ ಮಾಡಲು ಮಂಡಳಿ ತೀರ್ಮಾನಿಸಿದೆ. ನಿಯಮಗಳು ಈ ಕೆಳಗಿನಂತಿವೆ.

1) ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ.
2) ಬ್ಲೂಟೂತ್ ಡಿವೈಸ್, ವಾಚ್. ಎಲೆಕ್ಟ್ರಾನಿಕ್ ಕ್ಯಾಲುಕೇಟರ್ ಗೆ ನಿರ್ಬಂಧ ವಿಧಿಸಲಾಗಿದ್ದು, ಸಾಮಾನ್ಯ ಕ್ಯಾಲುಕೇಟರ್ ಗೆ ಮಾತ್ರ ಅನುಮತಿ ನೀಡಲಾಗಿದೆ.
3) ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ (examination centres) ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಜೆರಾಕ್ಸ್, ಟೈಪಿಂಗ್ ಸೈಬರ್ ಸೆಂಟರ್ ನಿಷೇಧಿಸಲಾಗಿದೆ.

ಸಧ್ಯ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಸಂಸ್ಥೆಗಳು ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ವಾಪಸ್ ಆಗುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು