Sunday, June 16, 2024

ಸತ್ಯ | ನ್ಯಾಯ |ಧರ್ಮ

ಇಂದಿನಿಂದ ಹಂಪಿ ಕನ್ನಡ ವಿ.ವಿ. ವಿದ್ಯಾರ್ಥಿಗಳ ಅಹೋರಾತ್ರಿ ಧರಣಿ : ರಕ್ಷಣೆ ಕೋರಿ ಪೊಲೀಸರಿಗೆ ಮನವಿ

ಹೊಸಪೇಟೆ: ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರದಿಂದ ಅಹೋರಾತ್ರಿ ಧರಣಿ ನಡೆಸಲಿದ್ದು, ತಮಗೆ ರಕ್ಷಣೆ ಒದಗಿಸಿಬೇಕೆಂದು ಕಮಲಾಪುರ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳು ಮನವಿ ಪತ್ರದಲ್ಲಿ ತಿಳಿಸಿರುವ ಮಾಹಿತಿ ಪ್ರಕಾರ, ಕಳೆದ ನಾಲ್ಕು ವರ್ಷಗಳಿಂದ ಫೆಲೋಶಿಪ್ ನೀಡುವಂತೆ ವಿವಿ ಆಡಳಿತಾಂಗಕ್ಕೆ ಮನವಿಗಳನ್ನು ಸಲ್ಲಿಸುತ್ತಾ ಬಂದಿದ್ದು, ಅಗತ್ಯವಿದ್ದಾಗ ಪ್ರತಿಭಟನೆ, ಧರಣಿ ಮಾಡುತ್ತಾ ಬಂದಿದ್ದೇವೆ. ಅದಾಗ್ಯೂ ಏಪ್ರಿಲ್‌ತಿಂಗಳಲ್ಲಿ ಮುಖ್ಯಮಂತ್ರಿಗಳು ವಿವಿಯಲ್ಲಿ ವಿವಿಧ ಕಾಮಗಾರಿ, ಕಟ್ಟಡಗಳ ಉದ್ಘಾಟನೆಗೆ ಬಂದಿದ್ದ ಸಮಯದಲ್ಲಿ ನಾಲ್ಕು ವರ್ಷಗಳಿಂದ ಬಾಕಿ ಇರುವ ಫೆಲೋಶಿಪ್ ನೀಡುವಂತೆ ಮನವಿ ಮಾಡಲಾಗಿತ್ತು. ಅಲ್ಲದೆ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಫೆಲೋಶಿಪ್‌ಗೆ ಅಗತ್ಯವಿರುವ ಅನುದಾನವನ್ನು ತಮ್ಮ ವಿವೇಚನಾ ನಿಧಿಯಿಂದ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರು ಎಂದು ವಿದ್ಯಾರ್ಥಿಗಳು ಮನವಿಯಲ್ಲಿ ತಿಳಿಸಿದ್ದಾರೆ.

ನ.11ರಂದು ಸರ್ಕಾರ 7 1189.61 ಲಕ್ಷ ವಿವಿಯ ಪರಿಶಿಷ್ಟ ಜಾತಿ, ಪಂಗಡಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಬಾಕಿ ಇರುವ ಮಾಸಿಕ ಆರ್ಥಿಕ ನೆರವು ನೀಡಬೇಕೆಂದು ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆಯ ಆದೇಶ ನೀಡಿದೆ.ಆದರೆ ಕುಲಪತಿಗಳು ಹಾಗೂ ಕುಲಸಚಿವರು ಕಳೆದ ನಾಲೈದು ದಿನಗಳಿಂದ ಭೇಟಿ ಮಾಡಿ ಸರ್ಕಾರ ನೀಡಿರುವ ಅನುದಾನ ಕೂಡಲೇ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಬೇಕೆಂದು ಮನವಿ ಮಾಡುತ್ತಾ ಬಂದಿದ್ದೇವೆ. ಆದರೆ ಮನವಿಗೆ ಸ್ಪಂದಿಸದೆ ಬಂದಿರುವ ಹಣವನ್ನು ನಿಮಗೆ ಕೊಡುವುದಿಲ್ಲ ಎಂದು ಹೇಳುತ್ತಿದ್ದಾರೆಂದು ವಿದ್ಯಾರ್ಥಿಗಳು ದೂರಿದ್ದಾರೆ.

ಮನವಿಗೆ ಸ್ಪಂದಿಸಿದ ಕಾರಣ, ಸಂಶೋಧನಾ ವಿದ್ಯಾರ್ಥಿಗಳ ಖಾತೆಗೆ ಹಣ ಬಿಡುಗಡೆಯಾಗುವವರೆಗೆ ಭಾನುವಾರ ಬೆಳಿಗ್ಗೆ 10ಗಂಟೆಯಿಂದ ಆಹೋರಾತ್ರಿ ಧರಣಿ ನಡೆಸುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಹಂಪಿ ವಿವಿ ವಿದ್ಯಾರ್ಥಿಗಳು ರಕ್ಷಣೆ ಕೋರಿ ಸಲ್ಲಿಸಿರುವ ಮನವಿ ಪತ್ರ

Related Articles

ಇತ್ತೀಚಿನ ಸುದ್ದಿಗಳು