Home ಅಪರಾಧ 60 ಲಕ್ಷ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿ ಗದಗ್‌ ರೈತನ ಕುಟುಂಬ ಆತ್ಮಹತ್ಯೆಗೆ ಯತ್ನ

60 ಲಕ್ಷ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿ ಗದಗ್‌ ರೈತನ ಕುಟುಂಬ ಆತ್ಮಹತ್ಯೆಗೆ ಯತ್ನ

ಗದಗ : ದುಷ್ಕರ್ಮಿಗಳು ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಗದ್ದೆಗೆ ಬೆಂಕಿ ಹಚ್ಚಿದ ಪರಿಣಾಮ ಸುಮಾರು 60 ಲಕ್ಷ ಮೌಲ್ಯದ ಮೆಕ್ಕೆಜೋಳ ಸುಟ್ಟು ಭಸ್ಮವಾದ ಘಟನೆ ಗದಗ (Gadag)  ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಗಣೇಶ ಹಾಗೂ ಗೋಪಿ ಚವ್ಹಾಣ ಸಹೋದರರು ಸುಮಾರು 100 ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆದಿದ್ದರು. ಆದರೆ ನಾಲ್ಕು ಜನರು ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸುಟ್ಟು ಹೋಗುತ್ತಿದ್ದ ಮೆಕ್ಕೆಜೋಳಕ್ಕೆ ಮಕ್ಕಳ‌ ಸಮೇತ ರೈತ ಕುಟುಂಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದೆ. ಈ ವೇಳೆ ಸ್ಥಳದಲ್ಲಿದ್ದ ಗ್ರಾಮಸ್ಥರು ರೈತ ಕುಟುಂಬವನ್ನು ರಕ್ಷಣೆ ಮಾಡಿದ್ದಾರೆ. ಕಣ್ಮುಂದೆ ಸುಟ್ಟು ಕರಕಲಾದ ಮೆಕ್ಕೆಜೋಳವನ್ನು ನೋಡಿ ರೈತರು ಕಣ್ಣೀರು ಹಾಕಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ಸಂಬಂಧಿಸಿ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

You cannot copy content of this page

Exit mobile version