Sunday, June 16, 2024

ಸತ್ಯ | ನ್ಯಾಯ |ಧರ್ಮ

ಹೊಳೆಹೊನ್ನೂರಿನಲ್ಲಿ ಗಾಂಧಿ ಪ್ರತಿಮೆ ದ್ವಂಸ ; ಸ್ಥಳೀಯರ ಆಕ್ರೋಶ

ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರಿನಲ್ಲಿ ಕಿಡಿಗೇಡಿಗಳು ಮಹಾತ್ಮಾ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ತಡರಾತ್ರಿ ಈ ಕೃತ್ಯ ನಡೆದಿದ್ದು ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದ್ದಾರೆ.

ಹೊಳೆಹೊನ್ನೂರಿನ ಸರ್ಕಲ್‌ನಲ್ಲಿ ಗಾಂಧಿ ಪ್ರತಿಮೆ ಇದ್ದು, ಅದರ ಸುತ್ತಲು ಮಂಟಪ ನಿರ್ಮಿಸಲಾಗಿದೆ. ಈ ಮಂಟಪದೊಳಗಿದ್ದ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ. ಕಿಡಿಗೇಡಿಗಳ ಪತ್ತೆಗಾಗಿ ಸಮೀಪದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಡರಾತ್ರಿ ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯ ಜನರು ಗುಂಪುಗೂಡಿದ್ದು, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಗಾಂಧಿ ಸರ್ಕಲ್ ಬಳಿ ರಸ್ತೆ ತಡೆ ಮಾಡಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು