ರಾಣೇಬೆನ್ನೂರು: ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಿನ್ನೆ ಮಂಗಳವಾರ ರಾತ್ರಿ ಗಣೇಶನ ಮೆರವಣಿಗೆ ವೇಳೆ ಘರ್ಷಣೆ ನಡೆದಿದೆ.
ಈ ಹಿನ್ನಲೆ ಗಣೇಶ ಮೆರವಣಿಗೆ ವೇಳೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ 300 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೆರವಣಿಗೆ ನಗರದ ದರ್ಗಾ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು, ರಾತ್ರಿ 8.30ರ ಸುಮಾರಿಗೆ ಮೆರವಣಿಗೆ ಮೇಲೆ ಗುಂಪೊಂದು ಮಾರಕಾಯುಧಗಳಿಂದ ಹಲ್ಲೆ ನಡೆಸಿ, ಹಿಂಸಾಚಾರಕ್ಕೆ ಕಾರಣವಾಗಿದ್ದು, ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: https://www.youtube.com/watch?v=tGIb2JRE43w