ಡ್ರಾಪ್ ಮಾಡುವ ನೆಪದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಆರೋಪದ ಮೇಲೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಇಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಬಳಿ ಗುರುವಾರ ಈ ಘಟನೆ ಸಾಮೂಹಿಕ ಅತ್ಯಾಚಾರದ ಪ್ರಕರಣ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಕೇರಳ ಮೂಲದ ಯುವತಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರಿನ ಬಿಟಿಎಂ ಲೇಔಟ್ ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದ ಸಂತ್ರಸ್ಥ ಯುವತಿ ಶುಕ್ರವಾರ ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದಳು. ಬೈಕ್ ನ ಮೂಲಕ ನೀಲಾದ್ರಿ ನಗರಕ್ಕೆ ಬುಕ್ ಮಾಡಿದ್ದ ಯುವತಿ ಮದ್ಯಪಾನ ಮಾಡಿದ್ದಳು ಎಂದು ತಿಳಿದು ಬಂದಿದೆ. ಬೈಕ್ ನಲ್ಲಿ ಡ್ರಾಪ್ ಮಾಡಲು ಬಂದಿದ್ದ ವ್ಯಕ್ತಿ, ಯುವತಿ ಮದ್ಯಪಾನ ಮಾಡಿದ್ದನ್ನು ಗಮನಿಸಿದ್ದಾನೆ. ನಂತರ ಬೈಕ್ ನೀಲಾದ್ರಿ ನಗರ ತಲುಪುವ ವೇಳೆಗಾಗಲೇ ಯುವತಿ ಅರೆ ಪ್ರಜ್ಞಾವಸ್ತೆ ತಲುಪಿದ್ದಾಳೆ.
ನಂತರ ಆತ ಯುವತಿಯನ್ನು ಡ್ರಾಪ್‌ಪಾಯಿಂಟ್‍ಗೆ ಇಳಿಸದೆ ತಮ್ಮ ರೂಂಗೆ ಕರೆದೊಯ್ದಿದ್ದಾನೆ. ಈ ವೇಳೆ ರ‍್ಯಾಪಿಡೋ ಬೈಕ್ ಸವಾರ ಮತ್ತು ಆತನ ಸ್ನೇಹಿತ ಸೇರಿಕೊಂಡು ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಪ್ರಜ್ಞೆ ಬಂದ ಬಳಿಕ ಆರೋಪಿಗಳು ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಯುವತಿಯನ್ನು ಬಿಟ್ಟು ಕಳುಹಿಸಿದ್ದಾರೆ.
ಘಟನೆ ಬಳಿಕ ಸಂತ್ರಸ್ತ ಯುವತಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ದೂರು ಆಧರಿಸಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.