ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಮಾನಸಿಕ ಅಸ್ವಸ್ಥ ಮತ್ತು ಕಿವುಡ-ಮೂಕ ಮಹಿಳೆಯೊಬ್ಬಳನ್ನು ನಿರ್ಜನ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ ವ್ಯಕ್ತಿಗಳು ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಭಯಾನಕ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದು, ಇಬ್ಬರು ಶಂಕಿತರನ್ನು ಗುರುತಿಸಲು ಸಹಾಯ ಮಾಡಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಪೊಲೀಸರ ಕಾರ್ಯಾಚರಣೆ ನಂತರ ಇಬ್ಬರು ಆರೋಪಿಗಳಾದ ಅಂಕುರ್ ವರ್ಮಾ ಮತ್ತು ಹರ್ಷಿತ್ ಪಾಂಡೆ ಅವರನ್ನು ಬಂಧಿಸಲಾಯಿತು ಮತ್ತು ಪ್ರಾಥಮಿಕ ವಿಚಾರಣೆಯಲ್ಲಿ ಅವರು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕಾಶ್ ಕುಮಾರ್ ತಿಳಿಸಿದ್ದಾರೆ.
16 ಸೆಕೆಂಡುಗಳ ಸಿಸಿಟಿವಿ ದೃಶ್ಯಾವಳಿಯಲ್ಲಿ, ಮಂದ ಬೆಳಕಿನ ನಿರ್ಜನ ರಸ್ತೆಯಲ್ಲಿ ಬರಿಗಾಲಿನಲ್ಲಿ ಮಹಿಳೆ ಓಡುತ್ತಿರುವುದನ್ನು ಮತ್ತು ಮೋಟಾರ್ ಸೈಕಲ್‌ಗಳಲ್ಲಿ ಪುರುಷರು ಅವಳನ್ನು ಬೆನ್ನಟ್ಟುತ್ತಿರುವುದು ಕಂಡುಬಂದಿದೆ.