ರಾಜಸ್ಥಾನ : 8 ನೇ ತರಗತಿಯಲ್ಲಿ ಓದುತ್ತಿರುವ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಕಿಶನ್‌ಗಢ್ ಬಾಸ್ ಪ್ರದೇಶದಲ್ಲಿ ನೆಡೆದಿದೆ.
ಬಾಲಕಿಯ ಮೇಲೆ ಹತ್ಯಾಚಾರ ಎಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡಿರುವುದಲ್ಲದೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಈ ಹಿನ್ನಲೆ ಸಂತ್ರಸ್ತೆಯ ಕುಟುಂಬಸ್ಥರು ಹತ್ಯಾಚಾರ ಎಸಗಿರುವವರ ಮೇಲೆ ದೂರು ದಾಖಲಿಸಿದ್ದಾರೆ.
ದೂರಿನ ಮೇರೆಗೆ ಎಲ್ಲಾ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ, ಸಾಮೂಹಿಕ ಅತ್ಯಾಚಾರ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಕರಣದ ತನಿಖೆಯನ್ನು ಕಿಶನ್‌ಗಢ್ ಬಾಸ್‌ನ ಡಿಎಸ್‌ಪಿ ಅತುಲ್ ಅಗ್ರೆ ಅವರಿಗೆ ಹಸ್ತಾಂತರಿಸಲಾಗಿದ್ದು, ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಹೆಚ್ಚಿನ ತನಿಖೆ ಕೈಗೊಳ್ಳಲಾಗುವುದು ಎಂದು ಅಗ್ರೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಿದ್ದಾರೆ. ಪ್ರಸ್ತುತ ಆರೋಪಿಗಳನ್ನು ಗುರುತಿಸಲಾಗಿದ್ದು, ಶೀಘ್ರವೇ ಎಲ್ಲರನ್ನೂ ಬಂಧಿಸುವುದಾಗಿ ಡಿಎಸ್‌ಪಿ ಅಗ್ರೆ ಹೇಳಿದ್ದಾರೆ.