Home ರಾಜ್ಯ ಬಳ್ಳಾರಿ ಬ್ರೇಕಿಂಗ್: ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳು ಬಂಧನ!

ಬ್ರೇಕಿಂಗ್: ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳು ಬಂಧನ!

0

ಬಳ್ಳಾರಿ: ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಕೊಲೆ ಪ್ರಕರಣದಲ್ಲಿ ಭಾಗಿಯಾದ ಐವರು ಆರೋಪಿಗಳ ಪೈಕಿ ನಾಲ್ವರನ್ನು ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಧನಂಜಯ್, ಮೈಲಾರಿ ಅಲಿಯಾಸ್ ವಿಜಯ್, ಸಲೀಂ ಮತ್ತು ಭೀಮ ಎಂದು ಗುರುತಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಲೀಲಾವತಿ ಆಸ್ಪತ್ರೆಯ ಮುಂಭಾಗದಲ್ಲಿ ತಡರಾತ್ರಿ ಈ ಕ್ರೌರ್ಯ ನಡೆದಿದೆ. ದುಷ್ಕರ್ಮಿಗಳು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು, ಸ್ನೇಹಿತರೊಂದಿಗೆ ಊಟ ಮುಗಿಸಿ ದೇವಿ ಕ್ಯಾಂಪ್‌ನಿಂದ ಗಂಗಾವತಿಗೆ ಹೋಗುತ್ತಿದ್ದ ವೆಂಕಟೇಶ್ ಅವರ ಬೈಕ್ ಅನ್ನು ಹಿಂಬಾಲಿಸಿ ಕಾರಿನಿಂದ ಗುದ್ದಿದ್ದಾರೆ. ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ಮಾಡಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಗಂಗಾವತಿ ಡಿವೈಎಸ್‌ಪಿ ಸಿದ್ಧನಗೌಡ ಪಾಟೀಲ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

You cannot copy content of this page

Exit mobile version