Home ಇನ್ನಷ್ಟು ಕೋರ್ಟು - ಕಾನೂನು BREAKING NEWS : ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಜಾಮೀನು ಮಂಜೂರು

BREAKING NEWS : ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಜಾಮೀನು ಮಂಜೂರು

0

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿನ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಅಮಿತ್‌ ದಿಗ್ವೇಕರ್‌ ಅಲಿಯಾಸ್‌ ಅಮಿತ್‌ ಅಲಿಯಾಸ್‌ ಪ್ರದೀಪ್‌ ಮಹಾಜನ್‌; ಏಳನೇ ಆರೋಪಿ ಸುರೇಶ್‌ ಎಚ್‌ ಎಲ್‌ ಅಲಿಯಾಸ್‌ ಟೀಚರ್‌ ಮತ್ತು 17ನೇ ಆರೋಪಿ ಕೆ ಟಿ ನವೀನ್‌ ಕುಮಾರ್‌ ಅಲಿಯಾಸ್‌ ನವೀನ್‌ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕಲಬುರ್ಗಿ ಪೀಠದಲ್ಲಿರುವ ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

2017ರ ಸೆಪ್ಟೆಂಬರ್‌ 5ರಂದು ಗೌರಿ ಲಂಕೇಶ್‌ ಅವರು ಕೆಲಸ ಮುಗಿಸಿ ಮನೆಗೆ ಮರಳಿದ ವೇಳೆ ಗುಂಡು ಹಾರಿಸಿ ಕೊಲ್ಲಲಾಗಿತ್ತು. ಹತ್ಯೆಯ ಸಂಚು ರೂಪಿಸಿದ ಪ್ರಮುಖ ರೂವಾರಿ ಎಂದು ಅಮೋಲ್ ಕಾಳೆ ಮೇಲೆ ಆರೋಪವಿದ್ದರೆ, ಗುಂಡು ಹಾರಿಸಿದ ಆರೋಪ ಪರಶುರಾಮ್ ವಾಗ್ಮೋರೆ ಮೇಲೂ ಹಾಗೂ ಆತನನ್ನು ಕೂರಿಸಿಕೊಂಡು ಬೈಕ್ ಚಲಾಯಿಸಿ ತಪ್ಪಿಸಿಕೊಳ್ಳಲು ನೆರವಾದ ಆರೋಪವು ಗಣೇಶ್ ಮಿಸ್ಕಿನ್ ಮೇಲೂ ಇದೆ.

ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ಬಾಡ್, ಅಮಿತ್ ದೆಗ್ವೇಕರ್, ಭರತ್ ಕುರಣೆ, ಸುರೇಶ್ ಹೆಚ್ ಎಲ್, ರಾಜೇಶ್ ಬಂಗೇರ, ಸುಧನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ್ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ ಎಡವೆ, ವಿಕಾಸ್‌ ಪಾಟೀಲ್‌, ಶ್ರೀಕಾಂತ್ ಪಂಗರ್ಕರ್, ಕೆ ಟಿ ನವೀನ್ ಕುಮಾರ್ ಮತ್ತು ಹೃಶಿಕೇಶ್ ದಿಯೋದಿಕರ್‌ ಪ್ರಕರಣದ ಆರೋಪಿಗಳಾಗಿದ್ದಾರೆ.

ಪ್ರಕರಣದ 11ನೇ ಆರೋಪಿ ಮೋಹನ್‌ ನಾಯಕ್‌ಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲಾ ಅರ್ಜಿದಾರರ ವಾದವಾಗಿತ್ತು. ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಪ್ರಾಸಿಕ್ಯೂಷನ್‌ “ಮೋಹನ್‌ ನಾಯಕ್‌ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠವು ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು ಎಂದಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದಿರುವ ಏಕೈಕ ಮತ್ತು ಮೊದಲ ಆರೋಪಿ ಮೋಹನ್‌ ನಾಯಕ್‌ ಆಗಿದ್ದು, ಆತನ ಜಾಮೀನು ಆದೇಶವನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅದು ವಿಚಾರಣೆಗೆ ಬಾಕಿಯಿದೆ” ಎಂದಿತ್ತು.

You cannot copy content of this page

Exit mobile version