ಬೆಂಗಳೂರಿನ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಅವರು ಮಹಾರಾಷ್ಟ್ರದ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾನೆ. ವಾರ್ಡ್ ಸಂಖ್ಯೆ 13 ರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪಂಗಾರ್ಕರ್ ಅವರು ಚುನಾವಣೆಯಲ್ಲಿ ಜಯಗಳಿಸಿದ್ದಾನೆ.
ಫಲಿತಾಂಶ ಪ್ರಕಟವಾದ ನಂತರ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದ ಪಂಗಾರ್ಕರ್, “ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ನನಗೆ ಇನ್ನೂ ಯಾವುದೇ ಶಿಕ್ಷೆಯಾಗಿಲ್ಲ. ಕಾನೂನು ಪ್ರಕ್ರಿಯೆ ಇನ್ನೂ ನಡೆಯುತ್ತಿದೆ,” ಎಂದು ಹೇಳಿಕೆ ನೀಡಿದ್ದಾನೆ.
2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನಲ್ಲಿ ಗೌರಿ ಲಂಕೇಶ್ ಅವರ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಬಂಧಿತರಾಗಿದ್ದ ಶ್ರೀಕಾಂತ್ ಪಂಗಾರ್ಕರನಿಗೆ 2024ರ ಸೆಪ್ಟೆಂಬರ್ 4ರಂದು ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನಿನ ಮೇಲೆ ಹೊರಬಂದ ಆತ ಈಗ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
