ರಾಯಚೂರು : ಏಳು ವರ್ಷದ ಬಾಲಕಿಯನ್ನು ಶಾಲೆಯಿಂದ ಕರೆದೊಯ್ದು ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆಯೊಂದು ರಾಯಚೂರಿನ ಮಾನವಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರ ಎಸಗಿ ಬಾಲಕಿಯನ್ನು ಅಲ್ಲೇ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಕೆಲ ಹೊತ್ತಿನ ನಂತರ ಬಾಲಕಿ ಅಳುತ್ತಾ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಯನ್ನು ಶಿವನಗೌಡ ಎಂದು ಗುರುತಿಸಲಾಗಿದೆ. ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 7 ವರ್ಷದ ಬಾಲಕಿಯನ್ನು ಯಾವುದೋ ಕಾರಣ ನೀಡಿ ಶಾಲೆಯಿಂದ ಕರೆದೊಯ್ಯಲಾಗಿದೆ. ಈ ವೇಳೆ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಲಾಗಿದೆ.
ಕೂಡಲೇ ಈ ಘಟನೆಗೆ ಸಂಬಂಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮತ್ತು ಶಾಲೆಯ ಆಡಳಿತ ಮಂಡಳಿಯರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.