ಬೆಂಗಳೂರು ತಮಿಳುನಾಡು ರೈಲ್ವೆ ಮಾರ್ಗದ ನಡುವೆ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಸೂಟ್ ಕೇಸ್ ನಲ್ಲಿ ಈ ಶವ ಪತ್ತೆಯಾಗಿದ್ದು, ಬಾಲಕಿಗೆ 10 ವರ್ಷ ವಯಸ್ಸು ಎಂದು ಅಂದಾಜಿಸಲಾಗಿದೆ.
ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಹೊಸೂರು ಮುಖ್ಯರಸ್ತೆಗೆ ಹೊಂದಿಕೊಂಡಿರೋ ರೈಲ್ವೆ ಬ್ರಿಡ್ಜ್ ಬಳಿ ಇಂದು ಬೆಳಗ್ಗೆಯೇ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಾಲಕಿ ಶವ ಇರುವ ಸೂಟ್ ಕೇಸ್ ತೆಗೆದು ಪರಿಶೀಲನೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಚಲಿಸುವ ರೈಲಿನಿಂದ ಬಾಲಕಿಯನ್ನು ಶವವನ್ನು ಎಸೆದಿರುವ ಶಂಕೆ ವ್ಯಕ್ತವಾಗಿದೆ. ಹಿಂದಿನ ದಿನ ರಾತ್ರಿ ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಈ ಸೂಟ್ ಕೇಸ್ ಎಸೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಸೂರ್ಯನಗರ ಪೊಲೀಸರಿಂದ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬೈಯಪ್ಪನ ಹಳ್ಳಿ ರೈಲ್ವೇ ಪೊಲೀಸರು ಸಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸೂರ್ಯನಗರ ಪೊಲೀಸ್ ಠಾಣೆ ಹಾಗೂ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.