Home ರಾಜ್ಯ ಬೆಳಗಾವಿ ಬೆಳಗಾವಿ | ʼನಾವೂ ಕನ್ನಡಿಗರುʼ ಎಂದು ಚಾಲಕನ ಮೇಲಿನ ಪ್ರಕರಣ ಹಿಂಪಡೆದ ಬಾಲಕಿಯ ತಾಯಿ

ಬೆಳಗಾವಿ | ʼನಾವೂ ಕನ್ನಡಿಗರುʼ ಎಂದು ಚಾಲಕನ ಮೇಲಿನ ಪ್ರಕರಣ ಹಿಂಪಡೆದ ಬಾಲಕಿಯ ತಾಯಿ

0

ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ವಿರುದ್ಧ ದಾಖಲಿಸಿದ್ದ ಪೋಕ್ಸೋ ಕೇಸ್ ಅನ್ನು ಬಾಲಕಿಯ ಪೋಷಕರು ವಾಪಸ್ ಪಡೆಯುತ್ತಿದ್ದಾರೆ.

ಈ ಕುರಿತು ಬಾಲಕಿ ಪೋಷಕರು ವಿಡಿಯೋ ಹೇಳಿಕ ಬಿಡುಗಡೆ ಮಾಡಿ ಸ್ಪಷ್ಟಪಡಿಸಿದ್ದಾರೆ. ಈ ವಿಡಿಯೋದಲ್ಲಿ ಮಾತನಾಡಿರುವ ಅಪ್ರಾಪ್ತೆಯ ಪೋಷಕರು, ಬೆಳಗಾವಿಯಿಂದ ಬಾಳೇಕುಂದ್ರಿಗೆ ನಮ್ಮ ಮಗಳು ಬರುತ್ತಿದ್ದಳು. ಟಿಕೆಟ್ ಪಡೆಯುವ ಸಂಬಂಧ ಆಗಿರುವ ಜಗಳ ಇದು. ನಾವೂ ಕನ್ನಡದ ಅಭಿಮಾನಿಗಳು, ನಮ್ಮಲ್ಲಿ ಜಾತಿ ಭೇದ ಭಾವ ಇಲ್ಲ. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಇದನ್ನು ಮುಂದಿಟ್ಟುಕೊಂಡು ಕರ್ನಾಟಕ, ಮಹಾರಾಷ್ಟ್ರ ನಡುವೆ ಜಗಳ ಆರಂಭವಾಗಿದೆ. ನಮ್ಮ ಮಗಳಿಗೆ ಅನ್ಯಾಯವಾಗಿದೆ. ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಸ್ವಇಚ್ಛೆಯಿಂದ ಪ್ರಕರಣ ವಾಪಸ್ ಪಡೆಯುತ್ತಿದ್ದೇವೆ. ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಬಾಲಕಿಯ ಪೋಷಕರು ಸ್ಪಷ್ಟನೆ ನೀಡಿದ್ದಾರೆ.

‘ಕಳೆದ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಬೆಳಗಾವಿ ಸಿಬಿಟಿಯಿಂದ ಸುಳೇಬಾವಿಗೆ ಹೊರಟಿದ್ದ ಬಸ್‌ನಲ್ಲಿ ಓರ್ವ ಯುವಕ, ಯುವತಿ ಪ್ರಯಾಣಿಸುತ್ತಿದ್ದರು. ಟಿಕೆಟ್‌ ಪಡೆಯಲು ನಿರ್ವಾಹಕ ಹೇಳಿದಾಗ, ಮರಾಠಿ ಭಾಷೆಯಲ್ಲಿ ಯುವಕ ಉತ್ತರಿಸಿದ್ದಾನೆ. ಮರಾಠಿ ಭಾಷೆ ಅರ್ಥವಾಗುತ್ತಿಲ್ಲ. ಕನ್ನಡದಲ್ಲಿ ಮಾತನಾಡಿ ಎಂದು ಕಂಡಕ್ಟರ್‌ ಹೇಳಿದ್ದಾರೆ.

ಈ ಕಾರಣಕ್ಕೆ ಯುವಕ-ಯುವತಿ ಇಬ್ಬರೂ ನಿರ್ವಾಹಕ ಮಹಾದೇವ ಅವರ ಮೇಲೆ ಮುಗಿಬಿದ್ದಿದ್ದಾರೆ. ಬಸ್‌ ಸುಳೇಬಾವಿ ಗ್ರಾಮ ಪ್ರವೇಶಿಸುತ್ತಿದ್ದಂತೆ ತಮ್ಮೂರಿನ ನಾಲ್ವರು ಯುವಕರನ್ನು ಕರೆಯಿಸಿಕೊಂಡು ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾರೆ,’ ಎಂದು ಡಿಸಿಪಿ ರೋಹನ್‌ ಜಗದೀಶ ಘಟನೆಯ ವಿವರ ನೀಡಿದ್ದರು.

You cannot copy content of this page

Exit mobile version