ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿ ನೀಡಿದ್ದಾರೆ.
ಅದರಂತೆ ‘ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ’ಯ ಒಂದು ತಿಂಗಳ ಹಣ ಬಿಡುಗಡೆ ಮಾಡುವುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಈಗಾಗಲೇ ಒಂದು ತಿಂಗಳ ಹಣವನ್ನು ಖಜಾನೆಗೆ ಕಳುಹಿಸಲಾಗಿದೆ. ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ 2,000 ರೂ. ಸಹಾಯಧನದ ಮೊತ್ತವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.