Home ನಿಧನ ಸುದ್ದಿ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮ*ತ್ಯೆ

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮ*ತ್ಯೆ

0

ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದೀಪ್ ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಶಾಸಕರ ಪುತ್ರ. ಸುದೀಪ್ ಬಾರ್ಕೂರಿನಲ್ಲಿ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ.

ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಬ್ರಿ ನಿವಾಸಿಯಾಗಿದ್ದ ಸುದೀಪ್ ಭಂಡಾರಿ ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬ್ರಹ್ಮಾವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You cannot copy content of this page

Exit mobile version