ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಮುಡಾ ಹಗರಣ ಮುಖ್ಯ ತಿರುವೊಂದನ್ನು ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ದಾಖಲೆಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇತ್ತೀಚೆಗೆ ದೂರು ದಾಖಲಾಗಿತ್ತು.ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ದೇವರಾಜು ಹಾಗೂ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಡಾಗೆ ವಂಚಿಸಿದ್ದಾರೆ ಎಂದು ದೂರಿದ್ದರು.
ಈ ಹಗರಣಕ್ಕೆ ಸಂಬಂಧಿಸಿದಂತೆ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಇತ್ತೀಚೆಗಷ್ಟೇ ಮೈಸೂರು ಚಲೋ ಪಾದಯಾತ್ರೆ ನಡೆಸಿದ್ದವು