Tuesday, January 27, 2026

ಸತ್ಯ | ನ್ಯಾಯ |ಧರ್ಮ

ಮೈಕ್ರೋಫೈನಾನ್ಸ್ ಕಿರುಕುಳದ ಕಡಿವಾಣಕ್ಕೆ ಸರ್ಕಾರ ನಿರ್ಧಾರ; ಪ್ರತ್ಯೇಕ ಕಾಯ್ದೆ ರಚನೆಗೆ ಚಿಂತನೆ : ಸಚಿವ ಹೆಚ್.ಕೆ.ಪಾಟೀಲ್

ಮೀಟರ್ ಬಡ್ಡಿ ಮತ್ತು ಮೈಕ್ರೋಫೈನಾನ್ಸ್ ಹಾವಳಿಯಿಂದ ಆತ್ಮಹತ್ಯೆಯ ಪ್ರಕರಣಗಳು ದಾಖಲಾಗುತ್ತಿದ್ದಂತೆಯೇ ಈಗ ಸರ್ಕಾರ ಎಚ್ಚೆತ್ತುಕೊಂಡಿದ್ದು, ಪ್ರತ್ಯೇಕ ಕಾಯ್ದೆ ರಚನೆಗೆ ಮುಂದಾಗಿದೆ. ಈ ಕಾಯ್ದೆಗೆ ಮುಂದಿನ ಅಧಿವೇಶನದಲ್ಲಿಯೇ ವಿಧೇಯಕ ಮಂಡಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ದಂಧೆ ಹಾಗೂ ಮೀಟರ್‌ ಬಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ರಾಜ್ಯದ ವಿವಿಧೆಡೆ ಖಾಸಗಿ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚಾಗಿದ್ದು, ಹೊಸ ಕಾನೂನಿನ ಮೂಲಕ ಮೀಟರ್ ಬಡ್ಡಿ ಮಾಫಿಯಾ, ಖಾಸಗಿ ಹಣಕಾಸು ಸಂಸ್ಥೆಗಳ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ನಿಗದಿತ ಬಡ್ಡಿ ದರಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸುವಂತಿಲ್ಲ ಎಂದು ಹೇಳಿದರು.

ಬಡವರ, ಮಧ್ಯಮ ವರ್ಗದ ಹಿತ ಕಾಯುವುದು ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿಗೆ ಕಿರುಕುಳ ನೀಡಿದಲ್ಲಿ ಕನಿಷ್ಠ 10 ವರ್ಷ ಜೈಲು, ಲಕ್ಷಾಂತರ ರೂ. ದಂಡ ವಿಧಿಸುವ ಬಗ್ಗೆ ಕಾನೂನು ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page