Wednesday, August 14, 2024

ಸತ್ಯ | ನ್ಯಾಯ |ಧರ್ಮ

ರಾಜ್ಯ ಬಿಪಿಎಲ್ ಪಡಿತರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ

ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಿರಂತರವಾಗಿ ಕೇಂದ್ರ ಸರ್ಕಾರದ ಜೊತೆಗಿನ ಸೆಣಸಾಟದ ನಂತರ ರಾಜ್ಯಕ್ಕೆ ಅಗತ್ಯವಿರುವ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ಕೆ ಹೆಚ್ ಮುನಿಯಪ್ಪ ಕೇಂದ್ರದಿಂದ ಕೆಜಿ ಅಕ್ಕಿಗೆ 28 ರೂಪಾಯಿ ದರ ನಿಗದಿ ಮಾಡಲಾಗಿದೆ. ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಷಿ ಜೊತೆಗೆ ಮಾತುಕತೆ ನಂತರ ಈ ಮಾಹಿತಿ ತಿಳಿಸಿದ ಸಚಿವ ಕೆ ಹೆಚ್ ಮುನಿಯಪ್ಪ ಕೇಂದ್ರ ಸರ್ಕಾರ ಅಕ್ಕಿ ನೀಡುವ ಭರವಸೆ ನೀಡಿದೆ ಎಂದು ಹೇಳಿದ್ದಾರೆ.

ಮಂಗಳವಾರ ಕೇಂದ್ರ ಸಚಿವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ಈಗಾಗಲೇ ಕೇಂದ್ರ ಸರ್ಕಾರ ರಾಜ್ಯದ 4 ಕೋಟಿ ಫಲಾನುಭವಿಗಳಿಗೆ ಉಚಿತವಾಗಿ ಅಕ್ಕಿ ವಿತರಿಸುತ್ತಿದೆ. ಉಳಿದ ಹೆಚ್ಚುವರಿ 13 ಲಕ್ಷ ಬಿಪಿಎಲ್ ಕಾರ್ಡ್ ನ 40 ರಿಂದ 50 ಲಕ್ಷ ಮಂದಿಗೆ ರಾಜ್ಯವೇ ಅಕ್ಕಿ ವಿತರಿಸುತ್ತಿದ್ದು, ಇದಕ್ಕಾಗಿ ಕೆಜಿ ಅಕ್ಕಿಗೆ 34 ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಬಿಪಿಎಲ್ ಪಡಿತರ ಚೀಟಿ ಫಲಾನುಭವಿಗಳಿಗೆ ಅಕ್ಕಿ ವಿತರಿಸಲು ಪ್ರತಿ ತಿಂಗಳಿಗೆ 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು. ಮುಖ್ಯಮಂತ್ರಿಗಳು, ಅಧಿಕಾರಿಗಳೊಂದಿಗೆ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page