Sunday, October 13, 2024

ಸತ್ಯ | ನ್ಯಾಯ |ಧರ್ಮ

ಬಾಬಾ ಸಿದ್ದಿಕಿ ಸಾವಿಗೆ ಸರ್ಕಾರವೇ ಹೊಣೆ: ರಾಹುಲ್ ಗಾಂಧಿ

ಎನ್‌ಸಿಪಿಯ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಯ ಹೊಣೆಯನ್ನು ಸರಕಾರವೇ ಹೊರಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಸಿದ್ದಿಕಿ ಹತ್ಯೆಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಸಿದ್ದಿಕಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಈ ಹತ್ಯೆಯೇ ಸಾಕ್ಷಿ ಎಂದರು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಶನಿವಾರ ರಾತ್ರಿ ಬಾಬಾ ಸಿದ್ದಿಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮೂವರು ಅಪರಿಚಿತ ದುಷ್ಕರ್ಮಿಗಳು ಬಾಂದ್ರಾದಲ್ಲಿರುವ ಅವರ ಮಗನ ಕಚೇರಿಯಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಎಚ್ಚರಗೊಂಡ ಭದ್ರತಾ ಸಿಬ್ಬಂದಿ ಮತ್ತು ಕುಟುಂಬಸ್ಥರು ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ಸಾಗಿಸಿದರು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಿದ್ದಿಕಿ ಕೊನೆಯುಸಿರೆಳೆದಿದ್ದಾರೆ. ಆದರೆ, ಇಬ್ಬರು ಶೂಟರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಿದ್ದಿಕಿ 1999, 2004 ಮತ್ತು 2009ರ ಚುನಾವಣೆಗಳಲ್ಲಿ ಬಾಂದ್ರಾ ಪಶ್ಚಿಮ ಕ್ಷೇತ್ರದಿಂದ ಶಾಸಕರಾಗಿ ಗೆದ್ದಿದ್ದರು. 2004 ಮತ್ತು 2009ರಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದರು. ಸಿದ್ದಿಕಿ ಅವರು ಸಾರ್ವಜನಿಕ ಸೇವೆ ಮತ್ತು ಗ್ರ್ಯಾಂಡ್ ಪಾರ್ಟಿಗಳನ್ನು ಮಾಡುವ ಖ್ಯಾತಿಯನ್ನು ಹೊಂದಿದ್ದಾರೆ. 2013ರಲ್ಲಿ ಸಿದ್ದಿಕಿ ಆಯೋಜಿಸಿದ್ದ ಇಫ್ತಾರ್ ಔತಣಕೂಟದಲ್ಲಿ ಬಾಲಿವುಡ್ ತಾರೆಯರಾದ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಭಾಗವಹಿಸಿದ್ದರು. ಆ ಸಮಯದಲ್ಲಿ ಅವರ ನಡುವೆ ಭಿನ್ನಾಭಿಪ್ರಾಯಗಳಿದ್ದವು. ಈ ಪಾರ್ಟಿಯಲ್ಲಿಯೇ ಸಿದ್ದಿಕಿ ಇಬ್ಬರು ಸ್ಟಾರ್ ಗಳನ್ನು ಒಟ್ಟಿಗೆ ತಂದು ಜಗಳಕ್ಕೆ ಕಡಿವಾಣ ಹಾಕಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page