Friday, June 14, 2024

ಸತ್ಯ | ನ್ಯಾಯ |ಧರ್ಮ

ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು ಸರ್ಕಾರದ ಚಿಂತನೆ ; ಸು.ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಆದರೆ ಕರ್ನಾಟಕ ಸರ್ಕಾರ CWRC ಆದೇಶವನ್ನು ಪಾಲಿಸದಿರಲು ನಿರ್ಧರಿಸಿದೆ.

ಸರ್ಕಾರ ಆಯೋಜಿಸಿದ್ದ ಸರ್ವಪಕ್ಷ ಸಭೆಯ ನಂತರ ಎಲ್ಲಾ ಪಕ್ಷಗಳ ಒಪ್ಪಿಗೆ ಪಡೆದು ಈ ನಿರ್ಧಾರಕ್ಕೆ ಬರಲಾಗಿದೆ. ಸರ್ವಪಕ್ಷ ಸಭೆಯ ನಂತರ CWRC ಆದೇಶವನ್ನು ಧಿಕ್ಕರಿಸಿ, ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಹೋರಾಡಲು ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

Related Articles

ಇತ್ತೀಚಿನ ಸುದ್ದಿಗಳು