Wednesday, June 19, 2024

ಸತ್ಯ | ನ್ಯಾಯ |ಧರ್ಮ

ಲೈಂಗಿಕ ಕಿರುಕುಳ ಆರೋಪ: ಸೇವೆಯಿಂದ ಸರ್ಕಾರಿ ವೈದ್ಯಾಧಿಕಾರಿ ಬಿಡುಗಡೆ

ಉಡುಪಿ: ಕುಂದಾಪುರ ತಾಲ್ಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದ ಆರೋಪದಡಿ ಎಫ್‌ಐಆರ್‌ ದಾಖಲಾದ ಕಾರಣ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಅಧಿಕಾರಿಯ ವಿರುದ್ಧ ಸಾರ್ವಜನಿಕರಿಂದಲೂ ಸರಣಿ ದೂರುಗಳು ಈ ಅಧಿಕಾರಿಯ ವಿರುದ್ಧ ದಾಖಲಾಗಿದ್ದವು ಎನ್ನಲಾಗಿದೆ.

ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ರಾಬರ್ಟ್ ರೆಬೆಲ್ಲೊ ಅವರನ್ನು ವಜಾಗೊಳಿಸಿ ಉಡುಪಿ ಜಿಲ್ಲಾಧಿಕಾರಿ (ಡಿಸಿ) ಡಾ.ಕೆ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತರ ಕಛೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಮಹಿಳಾ ವೈದ್ಯಾಧಿಕಾರಿಯೊಬ್ಬರು ರೆಬೆಲ್ಲೋ ತನಗೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ ಮತ್ತು ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿದೆ.

ರೆಬೆಲ್ಲೊ ಅವರು ತನಿಖೆಯಲ್ಲಿ ಹಸ್ತಕ್ಷೇಪ ಮಾಡದಂತೆ ಮತ್ತು ಯಾವುದೇ ಸಾಕ್ಷ್ಯವನ್ನು ನಾಶಪಡಿಸುವುದನ್ನು ತಡೆಯಲು ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಡಿಸಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ರೆಬೆಲ್ಲೊ ವಿರುದ್ಧ ಸಾರ್ವಜನಿಕರು ಕೂಡ ದೂರು ನೀಡಿದ್ದು, ಡಿಎಚ್‌ಒ ನೇತೃತ್ವದ ಸಮಿತಿ ಜಂಟಿ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಯವರಿಗೆ ವರದಿ ಸಲ್ಲಿಸಿತ್ತು.

Related Articles

ಇತ್ತೀಚಿನ ಸುದ್ದಿಗಳು