Monday, July 7, 2025

ಸತ್ಯ | ನ್ಯಾಯ |ಧರ್ಮ

ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ದಂಧೆ ನಿಷೇಧಕ್ಕೆ ಮುಂದಾದ ಸರ್ಕಾರ; ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ

ರಾಜ್ಯದಲ್ಲಿ ಆನ್‌ಲೈನ್‌ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ ನಂತಹ ಅನಾಹುತಕಾರಿ ಬೆಳವಣಿಗೆಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿಂದೆ ಹಲವಷ್ಟು ಬಾರಿ ಸರ್ಕಾರಕ್ಕೆ ನಾಗರಿಕ ಸಂಘಟನೆಗಳು ಮನವಿ ಮಾಡಿಕೊಂಡಿದ್ದರೂ ಮೀನಾ ಮೇಷ ಎಣಿಸುತ್ತಿದ್ದ ಸರ್ಕಾರ ದಿಢೀರನೆ ಈ ಬೆಳವಣಿಗೆಗೆ ಮುಂದಾಗಿದೆ.

ಎರಡು ದಿನಗಳ ಹಿಂದಷ್ಟೇ ದಾವಣಗೆರೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಗೇಮ್ ನಲ್ಲಿ 18 ಲಕ್ಷ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದ. ಇದಾದ ನಂತರ ಮತ್ತಷ್ಟು ಒತ್ತಡ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಅದರಂತೆ ಬೆಟ್ಟಿಂಗ್ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ (ತಿದ್ದುಪಡಿ) ಬಿಲ್ 2025 ಕರಡು ರೂಪಿಸಿದೆ.

ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಿರುವ ರಾಜ್ಯ ಸರ್ಕಾರ ಮುಂಬರುವ ಅಧಿವೇಶನದಲ್ಲಿ ‌ಮಂಡಿಸಲು ಮುಂದಾಗಿದೆ.

ಈ ಪ್ರಾಧಿಕಾರಕ್ಕೆ ಕಾನೂನು, ಸಾರ್ವಜನಿಕ ಆಡಳಿತ, ತಂತ್ರಜ್ಞಾನದ ಅನುಭವ ಹೊಂದಿರುವವರನ್ನು ರಾಜ್ಯ ಸರ್ಕಾರ ಅಧ್ಯಕ್ಷರಾಗಿ ನೇಮಿಸಲಿದೆ. ಜೊತೆಗೆ ಮೂವರು ಸದಸ್ಯರನ್ನು ನೇಮಕ ಮಾಡಲಿದೆ. ಓರ್ವ ಸದಸ್ಯ ಮಾಹಿತಿ ತಂತ್ರಜ್ಞಾನ, ಇನ್ನೊಬ್ಬ ಸದಸ್ಯ ಹಣಕಾಸು ಮತ್ತು ಮತ್ತೊಬ್ಬ ಸದಸ್ಯ ಸಮಾಜ ಕಲ್ಯಾಣದಲ್ಲಿ ಅನುಭವ ಹೊಂದಿರುವವರಾಗಿರಲಿದ್ದಾರೆ ಎಂದು ತಿಳಿದುಬಂದಿದೆ.

ಈ ಹೊಸ ಮಸೂದೆ ಪ್ರಕಾರ ಕಾನೂನು ಉಲ್ಲಂಘಿಸುವವರ ಮೇಲೆ ಕಠಿಣ ಶಿಕ್ಷೆ ವಿಧಿಸುವ ನಿಯಮ ರೂಪಿಸಲಾಗಿದೆ. ನೊಂದಾಯಿತವಲ್ಲದ ವೇದಿಕೆಗಳ ಮೂಲಕ ಗೇಮ್ಸ್ ಆಫ್ ಚಾನ್ಸ್ ಆಧಾರಿತ ಆನ್​ಲೈನ್ ಬೆಟ್ಟಿಂಗ್ ನಡೆಸುವ ವ್ಯಕ್ತಿ, ಸಂಸ್ಥೆ 3 ವರ್ಷ ವರೆಗಿನ ಸೆರೆಮನೆವಾಸ ಹಾಗೂ 1 ಲಕ್ಷವರೆಗೆ ದಂಡ ವಿಧಿಸುವ ಅವಕಾಶ ಇದೆ. ನಿರಂತರ ನಿಯಮ ಉಲ್ಲಂಘಿಸುವ ವ್ಯಕ್ತಿ, ಸಂಸ್ಥೆ ಮೇಲೆ 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page