ಬೆಂಗಳೂರಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಕೆಲಸ ಮಾಡುತ್ತಿದ್ದ 50 ವರ್ಷದ ಸರ್ಕಾರಿ ಅಧಿಕಾರಿ ಶಿವಮೊಗ್ಗದ ತಮ್ಮ ನಿವಾಸದಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರು ಪುಟಗಳ ತನ್ನ ಡೆತ್ ನೋಟ್ ನಲ್ಲಿ, ಮೃತ ಚಂದ್ರಶೇಖರನ್ ಪಿ ಅವರು ಹಲವು ಬ್ಯಾಂಕ್ ಖಾತೆಯನ್ನು ತೆರೆಯಲು ಮತ್ತು ಪ್ರಾಥಮಿಕ ಖಾತೆಯಿಂದ ಲೆಕ್ಕವಿಲ್ಲದಷ್ಟು ಹಣವನ್ನು ಅದಕ್ಕೆ ತಿರುಗಿಸಲು ಹಿರಿಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿದ್ದಾರೆ ಆದರೆ ಟಿಪ್ಪಣಿಯನ್ನು ಉಲ್ಲೇಖಿಸಿಲ್ಲ.
ಶಿವಮೊಗ್ಗ ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಸೋಮವಾರ ಈ ವಿಚಾರವಾಗಿ ಪತ್ರಿಕಾಗೋಷ್ಠಿ ನಡೆಸಿ ಮೃತರ ಡೇತ್ ನೋಟ್ ಪ್ರದರ್ಶಿಸಿದರು. ಅದರ ಪ್ರಕಾರ, ಪಾಲಿಕೆಯು ತನ್ನ ವಿವಿಧ ಖಾತೆಗಳಲ್ಲಿ 187.3 ಕೋಟಿ ರೂಪಾಯಿ ಅನುದಾನವನ್ನು ಹೊಂದಿದ್ದು, ಅದರಲ್ಲಿ ಸುಮಾರು 85 ಕೋಟಿ ರೂಪಾಯಿಗಳನ್ನು ಇತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಮತ್ತು “ಲೂಟಿ ಮಾಡಲಾಗಿದೆ” ಎಂದು ಶಾಸಕರು ಆರೋಪಿಸಿದ್ದಾರೆ.