Home ದೇಶ ಹಿಂದೂಗಳು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಲು ಸರ್ಕಾರದ ಅನುಮತಿ ಕಡ್ಡಾಯ

ಹಿಂದೂಗಳು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಲು ಸರ್ಕಾರದ ಅನುಮತಿ ಕಡ್ಡಾಯ

0

ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಬಿಜೆಪಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಗುಜರಾತ್ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ – 2003ರ ಪ್ರಕಾರ, ನೀವು ಹಿಂದೂ ಧರ್ಮದಿಂದ ಬೌದ್ಧ, ಜೈನ ಅಥವಾ ಸಿಖ್ ಧರ್ಮಕ್ಕೆ ಮತಾಂತರಗೊಳ್ಳಲು ಬಯಸಿದರೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ನಿಂದ ಪೂರ್ವಾನುಮತಿ ಪಡೆಯಬೇಕು. ಈ ಸಂಬಂಧ ಗುಜರಾತ್ ರಾಜ್ಯ ಗೃಹ ಇಲಾಖೆ ಏಪ್ರಿಲ್ 8ರಂದು ಸುತ್ತೋಲೆ ಹೊರಡಿಸಿದೆ.

ಆರ್ಟಿಕಲ್ 25(2) ಪ್ರಕಾರ ಬೌದ್ಧ, ಜೈನ ಮತ್ತು ಸಿಖ್ ಧರ್ಮಕ್ಕೆ ಮತಾಂತರಗೊಳ್ಳಲು, ಈ ಧರ್ಮಗಳು ಹಿಂದೂ ಧರ್ಮಕ್ಕೆ ಸೇರಿರುವುದರಿಂದ ಅನುಮತಿ ಅಗತ್ಯವಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದರೆ, ಗುಜರಾತ್ ನ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆಯಲ್ಲಿ ಬೌದ್ಧ ಧರ್ಮ ಪ್ರತ್ಯೇಕ ಧರ್ಮವಾಗಿರುವುದರಿಂದ ಹಿಂದೂ ಧರ್ಮದಿಂದ ಬೌದ್ಧ ಧರ್ಮವನ್ನು ಅಳವಡಿಸಿಕೊಳ್ಳಲು ನಿರ್ದಿಷ್ಟ ಸ್ವರೂಪದಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆಯಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಇದು ಸಿಖ್ ಮತ್ತು ಜೈನ ಧರ್ಮಕ್ಕೆ ಮತಾಂತರಗೊಂಡವರಿಗೂ ಅನ್ವಯಿಸುತ್ತದೆ.

ಗುಜರಾತ್‌ನಲ್ಲಿ ಕೆಲವು ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ. ಹಬ್ಬ ಹರಿದಿನಗಳಲ್ಲಿ ಧರ್ಮ ಬದಲಾಯಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅಹಮದಾಬಾದ್‌ನಲ್ಲಿ ಒಂದೇ ಬಾರಿಗೆ 400 ಜನರು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದರು. ಅಕ್ಟೋಬರ್ 2022ರಲ್ಲಿ ಗಿರ್ ಸೋಮನಾಥದಲ್ಲಿ 900 ಜನರು ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಗುಜರಾತ್ ಬೌದ್ಧ ಅಕಾಡೆಮಿ (GBA) ಇತರ ಕೆಲವು ಸಂಸ್ಥೆಗಳೊಂದಿಗೆ ಮತಾಂತರ ಕಾರ್ಯಕ್ರಮಗಳನ್ನು ನಡೆಸುತ್ತದೆ. ಏತನ್ಮಧ್ಯೆ, ಜಿಬಿಎ ಕಾರ್ಯದರ್ಶಿ ರಮೇಶ್ ಬಾಂಕರ್ ಅವರು ಸರ್ಕಾರ ನೀಡಿದ ಆದೇಶಗಳನ್ನು ಸ್ವಾಗತಿಸಿದ್ದಾರೆ. ಈ ಆದೇಶಗಳ ಮೂಲಕ ಬೌದ್ಧ ಧರ್ಮವು ಪ್ರತ್ಯೇಕ ಧರ್ಮವಾಗಿದೆ ಮತ್ತು ಹಿಂದೂ ಧರ್ಮದೊಂದಿಗೆ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

You cannot copy content of this page

Exit mobile version