ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡ ಬಗ್ಗೆ ವರದಿಯಾಗಿದೆ. ರಾಯಚೂರು ತಾಲ್ಲೂಕಿನ ಅರಸಿಗೇರ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತಗೊಂಡು ನಾಲ್ವರು ಮಕ್ಕಳು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳ ದುರವಸ್ಥೆ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿದ್ದರೂ ಈ ಬಗ್ಗೆ ಯಾವುದೇ ಸರ್ಕಾರಗಳು ಬಂದರೂ ಅವುಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಈಗಾಗಲೇ ಇರುವ ಬಹುತೇಕ ಎಲ್ಲಾ ಸರ್ಕಾರಿ ಶಾಲೆಗಳ ಕಟ್ಟಡಗಳು ಹಳೆಯದಾಗಿದ್ದು, ಈ ಬಗ್ಗೆ ಸರ್ಕಾರ ಕೂಡಲೇ ಗಮನ ಹರಿಸಬೇಕು ಎಂದು ಸಾರ್ವಜನಿಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಇನ್ನು ಅರಸಿಗೇರ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತಗೊಂಡು ನಾಲ್ವರು ಮಕ್ಕಳು ಗಾಯಗೊಂಡು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ ಘಟನೆಯಲ್ಲಿ ವಿದ್ಯಾರ್ಥಿನಿ ಚಂದ್ರಿಕಾ ಸೇರಿದಂತೆ ನಾಲ್ವರು ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.