Home ಬೆಂಗಳೂರು ಬಾರಿ ವಿರೋಧದ ಬೆನ್ನಲ್ಲೇ ಸಿಎಂ ಮಾಧ್ಯಮ ಕಾರ್ಯದರ್ಶಿ ರಾಘವೇಂದ್ರ ಭಟ್ – ನೇಮಕಾತಿ ಹಿಂಪಡೆದ ಸರ್ಕಾರ

ಬಾರಿ ವಿರೋಧದ ಬೆನ್ನಲ್ಲೇ ಸಿಎಂ ಮಾಧ್ಯಮ ಕಾರ್ಯದರ್ಶಿ ರಾಘವೇಂದ್ರ ಭಟ್ – ನೇಮಕಾತಿ ಹಿಂಪಡೆದ ಸರ್ಕಾರ

ಬೆಂಗಳೂರು : ಸಿಎಂ ಮಾಧ್ಯಮ ಕಾರ್ಯದರ್ಶಿ-3 ಹುದ್ದೆಗೆ ನೇಮಕವಾಗಿದ್ದ ರಾಘವೇಂದ್ರ ಭಟ್ ನೇಮಕಾತಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜುಲೈ 8ರಂದು ಮಾಧ್ಯಮ ಕಾರ್ಯದರ್ಶಿ-1 ಹುದ್ದೆಗೆ ಟಿ. ತ್ಯಾಗರಾಜ್, ಮಾಧ್ಯಮ ಕಾರ್ಯದರ್ಶಿ-2 ಹುದ್ದೆಗೆ ಆರ್. ಜಯಪ್ರಕಾಶ್ ಮತ್ತು ಮಾಧ್ಯಮ ಕಾರ್ಯದರ್ಶಿ-3 ಹುದ್ದೆಗೆ ರಾಘವೇಂದ್ರ ಭಟ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಈಗ ರಾಘವೇಂದ್ರ ಭಟ್ ನೇಮಕಾತಿಯನ್ನು ವಾಪಸ್ ಪಡೆದಿರುವುದಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನೂತನ ಅಧಿಸೂಚನೆ ಹೊರಡಿಸಿದೆ. ರಾಘವೇಂದ್ರ ಭಟ್ ನೇಮಕಾತಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ವಿರುದ್ಧ ರಾಘವೇಂದ್ರ ಭಟ್ ಟೀಕಿಸಿದ್ದರು ಎನ್ನಲಾದ ಪೋಸ್ಟ್ ಇತ್ತೀಚೆಗೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸರ್ಕಾರ ಅವರ ನೇಮಕಾತಿಯನ್ನು ಅಮಾನತಿನಲ್ಲಿ ಇರಿಸಿ ಆದೇಶ ಹೊರಡಿಸಿದೆ ಎನ್ನಲಾಗಿದೆ.

You cannot copy content of this page

Exit mobile version