‘ಮೈಕ್ರೋ ಫೈನಾನ್ಸ್’ ಹಾವಳಿ ಮತ್ತು ಕಿರುಕುಳ ತಡೆಗೆ ಶುಕ್ರವಾರವೇ ಸುಗ್ರೀವಾಜ್ಞೆ ಜಾರಿಯಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ನಿಂದ ಕಿರುಕುಳ ಆದರೆ ತಕ್ಷಣ ಪೊಲೀಸರಿಗೆ ದೂರು ನೀಡಬೇಕು ಆಗ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಈ ಬಗ್ಗೆ ಬೇಕಾದ ಅಗತ್ಯ ಕಾನೂನುಗಳನ್ನು ನಾಳೆಯೇ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ರಚನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಈಗ ಸುಗ್ರೀವಾಜ್ಞೆಗೆ ರಾಜ್ಯಪಾಲರ ಬಳಿ ಅಂಕಿತ ಪಡೆಯಲು ನಿರ್ಧರಿಸಿದೆ. ಇನ್ನು ಮೈಕ್ರೋಫೈನಾನ್ಸ್ ವಿಚಾರದ ಸುಗ್ರೀವಾಜ್ಞೆಗೆ ಸಂಬಂಧಿಸಿ ಮತ್ತೊಂದು ಹಂತದ ಸಭೆ ನಡೆಯಲಿದೆ. ಕ್ಯಾಬಿನೆಟ್ ಸಿಎಂಗೆ ನಿರ್ಣಯ ಕೈಗೊಳ್ಳುವ ಪರಮಾಧಿಕಾರ ನೀಡಿದ್ದು, ಕೆಲವು ಅಂಶಗಳನ್ನು ಮಸೂದೆಯಲ್ಲಿ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ. ಈ ಕಾರಣಕ್ಕೆ ಚರ್ಚೆಯ ಅಗತ್ಯತೆ ಇರುವ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.
ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡಲಾಗುತ್ತಿದೆ. ಸಂಜೆ 4 ಗಂಟೆಗೆ ಮಸೂದೆಗೆ ಸ್ಪಷ್ಟ ಚಿತ್ರಣ ನೀಡಲಾಗುತ್ತದೆ ಎಂಬ ಮಾಹಿತಿ ಸರ್ಕಾರದ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.