HDK ಮತ್ತು ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ರಾಜ್ಯಪಾಲರ ಮೀನಾಮೇಷ; ಮನವಿ ವಾಪಸ್

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಹಾಗೂ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಕೊರಿದ ಅರ್ಜಿಯನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ ಎಸ್‌ಐಟಿ ಹಾಗೂ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಲು ಪ್ರತ್ಯೇಕವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.

ಈ ಹಿಂದೆ ಕನ್ನಡದಲ್ಲಿದ್ದ ಸಾವಿರಾರು ಪುಟಗಳ ಆರೋಪ ಪಟ್ಟಿಯನ್ನು ಕನ್ನಡದಿಂದ ಇಂಗ್ಲೀಷ್ ಗೆ ಅನುವಾದಿಸಿ ತನಿಖಾಧಿಕಾರಿ ರಾಜ್ಯಪಾಲರಿಗೆ ಸಲ್ಲಿಸಿದ್ದರು. ಆದರೆ, ಕೆಲವು ತಾಂತ್ರಿಕ ಕಾರಣ ಮುಂದಿಟ್ಟು, ಅವುಗಳಿಗೆ ಸ್ಪಷ್ಟನೆ ಕೋರಿ ಲೋಕಾಯುಕ್ತ ಪೊಲೀಸರು ಮತ್ತು ಎಸ್‌ಐಟಿ ಅಧಿಕಾರಿಗಳಿಗೆ ರಾಜ್ಯಪಾಲರು ಆರೋಪ ಪಟ್ಟಿಯ ಕಡತ ಮರಳಿಸಿದ್ದಾರೆ ಎಂದು ಹೇಳಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು