Saturday, October 4, 2025

ಸತ್ಯ | ನ್ಯಾಯ |ಧರ್ಮ

ಕೋಳಿ, ಮೀನುಗಳಿಂದ ತಯಾರಿಸುವ ತಿನಿಸುಗಳಿಗೆ ಕೃತಕ ಬಣ್ಣ ಬಳಸದಂತೆ ನಿಷೇಧ ಹೇರಿದ ಸರ್ಕಾರ

ಬೆಂಗಳೂರು: ಚಿಕನ್‌ ಕಬಾಬ್‌, ಫಿಶ್‌ ಫ್ರೈ ಮುಂತಾದ ಮಾಂಸಾಹಾರಿ ತಿನಿಸುಗಳಿಗೆ ಕೃತಕ ಬಣ್ಣ ಬಳಸದಂತೆ ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಕೃತಕ ಬಣ್ಣಗಳು ಮನುಷ್ಯರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಕಾರಣ ಅವುಗಳನ್ನು ನಿಷೇಧಿಸಲಾಗಿದೆ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚೆಗೆ ರಾಜ್ಯದ 36 ಕಡೆಗಳಿಂದ ಕಬಾಬ್ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿತ್ತು. ಪರೀಕ್ಷೆಯ ಫಲಿತಾಂಶದಲ್ಲಿ ಈ ಬಣ್ಣಗಳಲ್ಲಿ ಕಾರ್ಮೋಸಿನ್ ಮಾದರಿ ಕಂಡುಬಂದ ಹಿನ್ನೆಲೆಯಲ್ಲಿ ನಿರ್ಬಂಧ ಹೇರಲಾಗಿದೆ.

ಈ ಕುರಿತಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಆದೇಶವನ್ನು ಮೀರಿ ಕೃತಕ ಬಣ್ಣಗಳನ್ನು ಆಹಾರಗಳಲ್ಲಿ ಬಳಸಿದರೆ ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೊದಲು ತಮಿಳುನಾಡು ಸರ್ಕಾರವು ಆ ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್‌ಗಳಲ್ಲಿ ಕೃತಕ ಬಣ್ನ ಬಳಸುವುದನ್ನು ನಿಷೇಧಿಸಿತ್ತು. ನಂತರ ಅದನ್ನು ಅನುಸರಿಸಿ ಕರ್ನಾಟಕವೂ ಈ ಬಣ್ಣಗಳ ಬಳಕೆಯನ್ನು ನಿಷೇಧಿಸಿದೆ.

ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page