Wednesday, September 18, 2024

ಸತ್ಯ | ನ್ಯಾಯ |ಧರ್ಮ

ಮತ್ತೊಮ್ಮೆ HSRP ನಂಬರ್ ಪ್ಲೇಟ್ ಗಡುವು ವಿಸ್ತರಿಸಿದ ಸರ್ಕಾರ

ಕರ್ನಾಟದಲ್ಲಿ 2019ರ ಏಪ್ರಿಲ್‌ 1ಕ್ಕೂ ಮೊದಲು ನೋಂದಣಿಯಾಗಿರುವ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ ಎಸ್‌ ಆರ್‌ ಪಿ) ವನ್ನು ಅಳವಡಿಸಲು ಸೆಪ್ಟಂಬರ್ 15ಕ್ಕೆ ಕೊನೆಯ ಗಡುವು ನೀಡಿತ್ತು. ಸೆ.15 ರ ನಂತರ ಯಾವುದೇ ಕಾರಣಕ್ಕೂ ಗಡುವು ವಿಸ್ತರಿಸಲು ಸಾಧ್ಯವಿಲ್ಲ ಎಂದೂ ಸಹ ತಿಳಿಸಿತ್ತು. ಆದರೆ ಹಿರಿಯ ವಕೀಲ ದೇವದತ್ ಕಾಮತ್ ಅವರು ಮತ್ತೊಮ್ಮೆ ಗಡುವು ವಿಸ್ತರಣೆಗೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.

ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ HSRP ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.

ಹಿರಿಯ ವಕೀಲ ದೇವದತ್ ಕಾಮತ್ ಅವರು ಸಲ್ಲಿಸಿದ ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 ಕ್ಕೆ ಮುಂದೂಡಲಾಗಿದ್ದು ವಾಹನ ಸವಾರರು ಕೆಲಕಾಲ ನಿಟ್ಟುಸಿರು ಬಿಡುವಂತಾಗಿದೆ.

ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆ ಸಂಬಂಧ ಹೈಕೋರ್ಟ್ನಲ್ಲಿ ದಾಖಲಾಗಿರುವ ಪ್ರಕರಣ ವಿಚಾರಣೆ ಸೆ.18ರಂದು ನಡೆಯಲಿರುವ ಕಾರಣ ಕೋರ್ಟ್ ನಿರ್ದೇಶನ ನೀಡುವವರೆಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಹಾಕದವರ ವಿರುದ್ಧ ಕ್ರಮ ಕೈಗೊಳ್ಳದಿರಲು ಸಾರಿಗೆ ಇಲಾಖೆ ನಿರ್ಧರಿಸಿತ್ತು, ಈ ನಿಟ್ಟಿನಲ್ಲಿ ಹೈಕೋರ್ಟ್ ನಿರ್ದೇಶನಕ್ಕಾಗಿ ಸರ್ಕಾರ ಕಾಯುತ್ತಿತ್ತು. ಇದೀಗ ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page