Thursday, July 24, 2025

ಸತ್ಯ | ನ್ಯಾಯ |ಧರ್ಮ

ವಿದ್ಯಾರ್ಥಿನಿ ಪ್ರಬುದ್ಧಾ ಸಾವು: CID ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮೇ 15ರಂದು ಬೆಂಗಳೂರು ದಕ್ಷಿಣ DCP ವ್ಯಾಪ್ತಿಯ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದ್ವಿತೀಯ ಬಿಬಿಎ ವಿದ್ತಾರ್ಥಿನಿ ಪ್ರಬುದ್ಧಾ ಸಾವಿನ ಪ್ರಕರಣವನ್ನು CID ತನಿಖೆಗೆ ಒಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತೆಯಾಗಿರುವ ಕೆ.ಆರ್.ಸೌಮ್ಯ ಅವರು ತಮ್ಮ ಪುತ್ರಿ ಸಾವಿನ ಪ್ರಕರಣದ ತನಿಖೆಗೆ ಒಪ್ಪಿಸಲು ಸಾಮಾಜಿಕ ಕಾರ್ಯಕರ್ತರ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಾಯಿಯ ಮನವಿ ಪುರಸ್ಕರಿಸಿ ಪ್ರಕರಣದ ತನಿಖೆಯನ್ನು CID ಗೆ ವರ್ಗಾಯಿಸಲು ಸೂಚಿಸಿದ್ದಾರೆ.

ಕಳೆದ ಮೇ 15ರಂದು ಸಾಮಾಜಿಕ ಹೋರಾಟಗಾರ್ತಿ ಕೆ ಆರ್‌ ಸೌಮ್ಯ ಅವರ ಮಗಳು ತನ್ನ ಮನೆಯಲ್ಲೇ ಶವವಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ನಂತರ ಈ ಪ್ರಕರಣವನ್ನು ಭೇದಿಸಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page