Home ರಾಜಕೀಯ ಗುಪ್ತಚರ ಸಂಸ್ಥೆಗಳಿಂದ ಎಚ್ಚರಿಕೆ: ಪ್ರತಿಪಕ್ಷ ನಾಯಕ ರಾಹುಲ್ ನಿವಾಸಕ್ಕೆ ಭದ್ರತೆ ಹೆಚ್ಚಳ..!

ಗುಪ್ತಚರ ಸಂಸ್ಥೆಗಳಿಂದ ಎಚ್ಚರಿಕೆ: ಪ್ರತಿಪಕ್ಷ ನಾಯಕ ರಾಹುಲ್ ನಿವಾಸಕ್ಕೆ ಭದ್ರತೆ ಹೆಚ್ಚಳ..!

0

ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳು ಕೋಲಾಹಲಕ್ಕೆ ಕಾರಣವಾಗಿವೆ. ಅವರ ಭಾಷಣಕ್ಕೆ ಈಗಾಗಲೇ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ದೆಹಲಿ ಪೊಲೀಸರ ಗುಪ್ತಚರ ಮೂಲಗಳಿಂದ ಮಾಹಿತಿ ಲಭಿಸಿದೆ. ಪ್ರಸ್ತುತ ಗೃಹ ಸಚಿವಾಲಯದ ಆದೇಶದಂತೆ ದೆಹಲಿ ಪೊಲೀಸರು ರಾಹುಲ್ ಗಾಂಧಿ ನಿವಾಸಕ್ಕೆ ಭದ್ರತೆ ಹೆಚ್ಚಿಸಿದ್ದಾರೆ. ನಿವಾಸದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಅದೇ ಪ್ರದೇಶಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡರ ಮೇಲೂ ನಿಗಾ ಇರಿಸಲಾಗಿತ್ತು. ಲೋಕಸಭೆಯಲ್ಲಿ ಆಡಳಿತ ಪಕ್ಷವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ನ ಪ್ರಮುಖ ನಾಯಕರು ಹೇಳಿಕೆ ನೀಡಿದ್ದು ಗೊತ್ತೇ ಇದೆ. ಮಧ್ಯರಾತ್ರಿ ಹಲವು ಸಂಘಟನೆಗಳ ಮುಖಂಡರು ರಾಹುಲ್ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ದೆಹಲಿ ಪೊಲೀಸರಿಗೆ ಲಭಿಸಿದೆ.

ಅವರ ವಿರುದ್ಧ ಬ್ಯಾನರ್, ಪೋಸ್ಟರ್ ಗಳು ರಾರಾಜಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಅದರೊಂದಿಗೆ ರಾಹುಲ್ ಗಾಂಧಿ ನಿವಾಸದಲ್ಲಿ ಎರಡು ಹೆಚ್ಚುವರಿ ತುಕಡಿಗಳನ್ನು ನಿಯೋಜಿಸಲಾಗಿದೆ. ಪ್ರತಿ ತುಕಡಿಯಲ್ಲಿ 16ರಿಂದ 18 ಪೊಲೀಸರಿದ್ದಾರೆ. ಇದಲ್ಲದೇ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಎಂಟರಿಂದ 20 ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಂಪೂರ್ಣ ತಪಾಸಣೆಯ ನಂತರವೇ ಹೊಸದಿಲ್ಲಿಯ ಗಡಿಗಳನ್ನು ಮುಚ್ಚಲಾಗಿದೆ. ಈ ಭಾಗದಲ್ಲಿ ಗಸ್ತು ಕೂಡ ಹೆಚ್ಚಿಸಲಾಗಿದೆ.

ಹೊಸದಿಲ್ಲಿ ಜಿಲ್ಲಾ ಉಪ ಪೊಲೀಸ್ ಆಯುಕ್ತ ದೇವೇಶ್ ಮಹಾಲಾ ಅವರು ಸೋಮವಾರ ರಾತ್ರಿ ಜಿಲ್ಲೆಯ ಎಲ್ಲಾ ಎಸಿಪಿಗಳು ಮತ್ತು ಪೊಲೀಸ್ ಠಾಣೆಯ ಉಸ್ತುವಾರಿಗಳಿಗೆ ಭದ್ರತೆಯನ್ನು ಹೆಚ್ಚಿಸುವಂತೆ ಸೂಚಿಸಿದ್ದಾರೆ. ಎಲ್ಲ ಪೊಲೀಸ್ ಠಾಣೆಗಳಲ್ಲಿ ಗುಪ್ತಚರ ವ್ಯವಸ್ಥೆಯನ್ನು ಬಲಪಡಿಸಲು ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಮೇಲೆ ಬೇಹುಗಾರಿಕೆ ನಡೆಸುವುದಲ್ಲದೆ, ಮುಂದಿನ ಕಾರ್ಯತಂತ್ರಗಳ ಬಗ್ಗೆ ವಿಚಾರಣೆ ನಡೆಸುವಂತೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರ ಮನೆಅಥವಾ ಇತರ ಸ್ಥಳಗಳ ಬಳಿ ಯಾವುದೇ ಪೋಸ್ಟರ್ ಅಥವಾ ಬ್ಯಾನರ್‌ಗಳನ್ನು ಹಾಕದಂತೆ ನೋಡಿಕೊಳ್ಳಲು ಉಪ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

You cannot copy content of this page

Exit mobile version