Monday, July 28, 2025

ಸತ್ಯ | ನ್ಯಾಯ |ಧರ್ಮ

2024ರ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಆಡಳಿತದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಬಿಜೆಪಿಯ ಹಿಂದಿನ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳು ಮತ್ತು ಅಕ್ರಮಗಳ ಬಗ್ಗೆ ತಮ್ಮ ಸರ್ಕಾರ ತನಿಖೆ ನಡೆಸಲಿದೆ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.

ಮೂಲಗಳ ಪ್ರಕಾರ, ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಕುರಿತು ಸರ್ಕಾರ ಯೋಜಿಸುತ್ತಿದೆ.

ಚುನಾವಣಾ ಪೂರ್ವದಲ್ಲಿ ತಮ್ಮ ಪಕ್ಷ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಲಿದೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ನ ಐದು ಭರವಸೆಗಳ ಅನುಷ್ಠಾನದಿಂದ ಬೊಕ್ಕಸಕ್ಕೆ ವರ್ಷಕ್ಕೆ 59 ಸಾವಿರ ರೂ. ವೆಚ್ಚವಾಗಲಿದ್ದು, ಈ ವರ್ಷ ಆಡಳಿತದ ಮೇಲೆ ಸ್ವಲ್ಪ ಹೆಚ್ಚಿನ ಹೊರೆಯಾಗುತ್ತದೆ ಎಂದರು.

“ನಾವು ಹಗರಣಗಳ ತನಿಖೆಯನ್ನು ನಡೆಸುತ್ತೇವೆ. ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲಾಗಿದೆ ಮತ್ತು ಅದರಲ್ಲಿ ಅಕ್ರಮಗಳು ನಡೆದಿರುವ ಆರೋಪಗಳಿವೆ. ನಾವು ಅದನ್ನು ತನಿಖೆ ಮಾಡುತ್ತೇವೆ. ಅಲ್ಲದೆ, 40 ಪರ್ಸೆಂಟ್ ಕಮಿಷನ್ ಆರೋಪದ ಕುರಿತಾಗಿಯೂ ತನಿಖೆ ನಡೆಸಲಿದ್ದೇವೆ. ಕೋವಿಡ್ ಸಮಯದಲ್ಲಿ ಆರೋಗ್ಯ ಸಂಬಂಧಿತ ಖರೀದಿಗಳಲ್ಲಿ ಅಕ್ರಮಗಳು ನಡೆದಿವೆ. ನೀರಾವರಿ ಯೋಜನೆಗಳಿಗೆ ಸಂಬಂಧಿಸಿದ ಅಕ್ರಮಗಳು ಮತ್ತು ಬಿಟ್‌ಕಾಯಿನ್ ಹಗರಣಗಳೆಲ್ಲವನ್ನೂ ತನಿಖೆ ಮಾಡಲಾಗುವುದು” ಎಂದು ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿಯಿಂದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ; ಅದನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸಲಾಗುವುದು ಎಂದರು.

ಕೊರೋನಾ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದ ಚಾಮರಾಜನಗರ ಆಸ್ಪತ್ರೆಯಲ್ಲಿ ಸಂಭವಿಸಿದ ಸಾವುಗಳ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದ ಅವರು, ”ಇಬ್ಬರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಅಂದಿನ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದರು, ಆದರೆ ಆಮ್ಲಜನಕ ಕೊರತೆಯಿಂದಾಗಿ ಹೆಚ್ಚಿನ ಸಾವುನೋವುಗಳು ಸಂಭವಿಸಿದ್ದವು. ಈ ಕುರಿತು ಅವರು ಸುಳ್ಳು ಹೇಳಿದ್ದು ಈ ಬಗ್ಗೆ ನಾವು ತನಿಖೆ ನಡೆಸಲಿದ್ದೇವೆ” ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page