Wednesday, January 28, 2026

ಸತ್ಯ | ನ್ಯಾಯ |ಧರ್ಮ

ಬೈಕ್ ಟ್ಯಾಕ್ಸಿ ಗೆ ಗ್ರೀನ್‌ ಸಿಗ್ನಲ್, ಸುಪ್ರೀಂ ಕೋರ್ಟ್‌ ನತ್ತ ಮುಖ ಮಾಡಿದ ಆಟೋ ಚಾಲಕರು

ಬೆಂಗಳೂರು : ಕರ್ನಾಟಕ ಹೈಕೋರ್ಟ್ (Karnataka High Court) ಬೈಕ್‌ಗಳನ್ನು ಟ್ಯಾಕ್ಸಿಗಳಾಗಿ (Bike Taxi) ಬಳಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದರೆ ಈ ನಿರ್ಧಾರದಿಂದ ಆಟೋ ಚಾಲಕರು (Auto Drivers) ಅಸಮಾದಾನ ಹೊರ ಹಾಕಿದ್ದಾರೆ. ತಮ್ಮ ನ್ಯಾಯಕ್ಕಾಗಿ ಆಟೋ ಚಾಲಕರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಮುಂದಾಗಿದ್ದಾರೆ.

ಹೌದು, ಹೈಕೋರ್ಟ್ ‌ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಏಕಸದಸ್ಯ ಪೀಠದ ಆದೇಶವನ್ನು ವಜಾಗೊಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಹಸಿರು ನಿಶಾನೆ ದೊರೆತಿದೆ. ಆದರೆ ಇದರಿಂದ ಆಟೋ ಚಾಲಕರಿಗೆ ಕಂಟಕವಾಗಿವ ಸಾಧ್ಯತೆ ಇದೆ. ಸಾರಿಗೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಇಚ್ಛಾಶಕ್ತಿಯ ಕೊರತೆಯಿಂದ ಕೋರ್ಟ್‌ನಲ್ಲಿ ಈ ಆದೇಶ ಬಂದಿದೆ ಎಂದು ಆಟೋ ಚಾಲಕರ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ.ಇದೀಗ ಆಟೋ ಚಾಲಕರು ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾಗಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು, ಸುಪ್ರೀಂ ಕೋರ್ಟ್ ಕದ ತಟ್ಟಲು ಆಟೋ ಚಾಲಕರ ಸಂಘಟನೆಗಳು ಚಿಂತನೆ ಮಾಡುತ್ತಿವೆ. ಆದರೂ ಕೆಲ ಆಟೋ ಚಾಲಕರು ಸಾರಿಗೆ ಇಲಾಖೆಯ ಮೂಲಕವೇ ಸುಪ್ರೀಂಗೆ ಅರ್ಜಿ ಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ.

ಈ ಹಿಂದೆ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿ 2025ರ ನವೆಂಬರ್ 26ರಂದು ಬೈಕ್ ಟ್ಯಾಕ್ಸಿಗಳು ಅಸುರಕ್ಷಿತ ಮತ್ತು ಕಾನೂನು ಬಾಹಿರ ಎಂದು ವರದಿ ನೀಡಿತ್ತು. ಈ ಬಗ್ಗೆ ಓಲಾ, ಊಬರ್ ಸೇರಿ ಹಲವು ಕಂಪನಿಗಳು ನ್ಯಾಯಾಲಯದ ಮೊರೆ ಹೋಗಿದ್ದವು. ಆದರೆ ಇದೀಗ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸಂಸ್ಥೆಗಳ ಮೇಲ್ಮನವಿಯನ್ನು ಪುರಸ್ಕರಿಸಿದೆ. ಅವುಗಳ ಸೇವೆ ಪುನರಾರಂಭಕ್ಕೆ ಅವಕಾಶ ಕಲ್ಪಿಸಿದೆ. ಈ ತೀರ್ಪಿನಿಂದಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳು ಅಧಿಕೃತವಾಗಿ ಮುಂದುವರೆಯಲಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page